2023-24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಗಾಯತ್ರಿ ಕೆ.ಹೆಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.