ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿ ಮಾಲೀಕರು ಎಸ್.ಸಿ, ಎಸ್.ಟಿ ಪಡಿತರ ಚೀಟಿದಾರರ ಕುಟುಂಬದ ಮಾಹಿತಿಯನ್ನು ಆಗಸ್ಟ್ ತಿಂಗಳ ಪಡಿತರ ವಿತರಿಸುವ ಸಂದರ್ಭದಲ್ಲಿ ಪಡಿತರ ಚೀಟಿಯ ಜೆರಾಕ್ಸ್ ಹಾಗೂ AJSK     ವತಿಯಿಂದ ನೀಡಿರುವ ಜಾತಿ ಪ್ರಮಾಣದ ಜೆರಾಕ್ಸ್ ಪ್ರತಿಯನ್ನು ನೀಡಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
====
ನಗರದಲ್ಲಿ ವನಮಹೋತ್ಸವ ಕಾರ್ಯಕ್ರಮ
ದಾವಣಗೆರೆ; ಆ. 3 (ಕರ್ನಾಟಕ ವಾರ್ತೆ) : ನಗರದ ತುಂಗಭದ್ರ ಬಡಾವಣೆಯ ಹತ್ತಿರ ಉದ್ಯಾನವನಕ್ಕಾಗಿ ಮೀಸಲಿಟ್ಟ 4.5 ಎಕರೆ ಭೂ ಪ್ರದೇಶದಲ್ಲಿ ಆಗಸ್ಟ್ 4 ರಂದು ಮಧ್ಯಾಹ್ನ 1 ಗಂಟೆಗೆ ವನಮಹೋತ್ಸವ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮವನ್ನು ಏರ್ಪಡಿಲಾಗಿದೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಚೇರಿ ಮತ್ತು ಮೆ. ಗ್ರಾಸಿಂ ಇಂಡಸ್ಟ್ರೀಸ್ ಲಿ. ಸಹಯೋಗದಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದ್ದು, ಜಿಲ್ಲಾಧಿಕಾರಿ ವೆಂಕಟೇಶ್ ಎಂ.ವಿ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ ಮಹಾವೀರ ಎಂ. ಕರೆಣ್ಣವರ, ಸ್ಮಾರ್ಟ್ ಸಿಟಿ ಲಿಮಿಟೆಡ್ ನಿರ್ದೇಶಕರು, ಮತ್ತು ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ಹಾಗೂ ಸದಸ್ಯರು ಭಾಗವಹಿಸಲಿದ್ದಾರೆ.
====

Leave a Reply

Your email address will not be published. Required fields are marked *