ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಆಗಸ್ಟ್ 9 ರಂದು ಹೊನ್ನಾಳಿ ತಾಲ್ಲೂಕು ಪ್ರವಾಸ ಕೈಗೊಳ್ಳಲಿದ್ದಾರೆ. ಸಾರ್ವಜನಿಕರು ತಮ್ಮ ದೂರುಗಳನ್ನು ಸಲ್ಲಿಸಬಹುದು..
ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆ ಅವರು ಆಗಸ್ಟ್ 9 ರಂದು ಹೊನ್ನಾಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1. ಗಂಟೆಯವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಸಾರ್ವಜನಿಕರು ತಮ್ಮ ದೂರು ಹಾಗೂ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್.ಕೌಲಾಪೂರೆ ತಿಳಿಸಿದ್ದಾರೆ.