ಜುಲೈ 2024ನೇ ಸಾಲಿನ ಅಧಿವೇಶನಕ್ಕಾಗಿ ಡೆಹರಾಡೂನ್ ನಲ್ಲಿರುವ ರಾಷ್ಟ್ರೀಯ ಇಂಡಿಯಾನ್ ಮಿಲಿಟರಿ ಕಾಲೇಜ್ನಲ್ಲಿ 8ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಬಾಲಕ ಮತ್ತು ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ರಾಜ್ಯದ 11 1/2 ವರ್ಷದಿಂದ 13 ವಯೋಮಾನದವರು ಅರ್ಜಿ ಸಲ್ಲಿಸಬಹುದು. ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಡಿಸೆಂಬರ್ 02, 2023 ರಂದು ನಡೆಲಿದೆ. ಅಕ್ಟೋಬರ್ 15 ಅರ್ಜಿ ಸಲ್ಲಿಸಲು ಕೊನೆಯದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 080-25586459 ಹಾಗೂ ವೆಬ್ ಸೈಟ್ www.rimc.gov.in ನ್ನು ಸಂಪರ್ಕಿಸಲು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕ ಡಾ.ಸಿ.ಎ ಹಿರೇಮಠ ತಿಳಿಸಿದ್ದಾರೆ.
