ಹಿಂದುಳಿದ ವರ್ಗಗಳ ನೇತಾರ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ರವರ 108 ನೇ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸೋಣ ಎಂದು ಜಿಲ್ಲಾಧಿಕಾರಿ ವೆಂಕಟೇಶ್.ಎಂ.ವಿ ಎಂದು ಹೇಳಿದರು.
ಗುರುವಾರ ಜಿಲ್ಲಾಡಳಿತ ಭವನದಲ್ಲಿ ನಡೆದ ದೇವರಾಜ ಅರಸು ಜಯಂತಿ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ ಆಗಸ್ಟ್ 20 ರಂದು ಬೆಳಿಗ್ಗೆ 10 ಗಂಟೆಗೆ ದೇವರಾಜ ಅರಸು ಬಡಾವಣೆಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಶ್ರೀಯುತರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ವಿವಿಧ ಕಲಾತಂಡಗಳ ಮೆರವಣಿಗೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಅರಸುರವರು ನಾಡಿಗೆ ನೀಡಿರುವ ಕೊಡುಗೆಗಳ ಕುರಿತು ಉಪನ್ಯಾಸ ಇರಲಿದೆ ಎಂದರು.
ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ಮಾತನಾಡಿ ಹಿಂದುಳಿದ ವರ್ಗಗಳ ಮೆಟ್ರಿಕ್- ಪೂರ್ವ, ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯಗಳು, ಆಶ್ರಮ ಶಾಲೆಗಳು, ಖಾಸಗಿ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಡಿ ದೇವರಾಜ ಅರಸು ರವರ ಜನ್ಮದಿನಾಚರಣೆಯನ್ನು ಕಡ್ಡಾಯವಾಗಿ ಆಚರಿಸಬೇಕೆಂದರು. ಮಾಜಿ ಮುಖ್ಯಮಂತ್ರಿ ಡಿ ದೇವರಾಜು ಅರಸು ರವರ ಪ್ರತಿಮೆ ಇರುವ ಸ್ಥಳದಲ್ಲಿ ಸುಣ್ಣ ಬಣ್ಣ ಸ್ವಚ್ಚತೆಯ ಬಗ್ಗೆ ಮಹಾನಗರಪಾಲಿಕೆ ಕ್ರಮಕೈಗೊಳ್ಳಬೇಕೆಂದು ತಿಳಿಸಿದರು. ಪ್ರತಿಮೆ ಇರುವ ಸ್ಥಳದಲ್ಲಿ ಅಲಂಕಾರಿಕ ಬಣ್ಣ ಬಣ್ಣ ಹೂವಿನ ಕುಂಡಲಗಳನ್ನು ಇಡುವಂತೆ ತೋಟಗಾರಿಕೆ ಇಲಾಖೆಯವರಿಗೆ ಸೂಚಿಸಿದರು.
2022-23ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಸ್ನಾತಕೋತ್ತರ ಪದವಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಅತ್ಯಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಗುವುದು. ನಿಲಯದಲ್ಲಿನ ವಿದ್ಯಾರ್ಥಿಗಳಿಗೆ ಪ್ರಬಂಧ, ಭಾಷಣ, ರಸಪ್ರಶ್ನೆ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡಲಾಗುವುದು ಎಂದರು.
ಸಭೆಯಲ್ಲಿ ದೂಡಾ ಆಯುಕ್ತರಾದ ಬಸವನಗೌಡ ಕೊಟೂರು, ಪಾಲಿಕೆ ರೇಣುಕಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗಾಯಿತ್ರಿ ಹಾಗೂ ವಿವಿಧ ಸಮುದಾಯಗಳ , ಸಂಘ ಸಂಸ್ಥೆಗಳ ಮುಖಂಡರು ಭಾಗವಹಿಸಿದ್ದರು.