ನ್ಯಾಮತಿ:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯನ್ನು ಆ ೩೦ ರಂದು ಕೆಪಿಸಿಸಿ ರಾಷ್ಟ್ರೀಯ ಮಾಜಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ರಾಹುಲ್ ಗಾಂಧಿಯವರು ಹಾಗೂ ರಾಜ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಸೇರಿದಂತೆ ಆ: ೩೦ರಂದು ಅಧಿಕೃತವಾಗಿ ಮೈಸೂರಿನಲ್ಲಿ ಚಾಲನೆ ನೀಡುತ್ತಿರುವ ಹಿನ್ನೆಲೆಯಲ್ಲಿ
ನ್ಯಾಮತಿ ತಾಲೂಕು ಪಲವನಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಆನ್ಲೈನ್ ಮೂಲಕ ಚಾಲನೆ ನೀಡಲು ಗ್ರಾಮ ಪಂಚಾಯಿತಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆಸಲು ತೀರ್ಮಾನಿಸಿದ್ದು ಅದರ ಅಂಗವಾಗಿ ಅಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು ಗ್ರಾಮ ಪಂಚಾಯಿತಿ ಮಟ್ಟದ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಸೇರಿದಂತೆ ಪೂರ್ವಭಾವಿ ಸಭೆಯಲ್ಲಿ ರೂಪರೇಷೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಸಭೆಯ ಮುಗಿದ ಬಳಿಕ ಮುಸ್ಯೇನಾಳ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರಾದ ಪ್ರಕಾಶ್ ನಾಯ್ಕ ರವರು ನಂತರ ಮಾತನಾಡಿ ವಿಶ್ವವೇ ತಿರುಗಿ ನೋಡುವಂತೆ ಮಾಡಿದ ಸನ್ಮಾನ್ಯ ಶ್ರೀ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರ ಮಾತಿನಂತೆ ನಡೆದು ಮಹಿಳೆಯರಿಗೆ ಸ್ಥಾನಮಾನ ನೀಡಿ ಸ್ನಾನಮಾನ ಕೊಟ್ಟಂತ ಸರ್ಕಾರ ಯಾವುದಾದರೂ ಇದ್ದರೆ ಅದುವೇ ಕಾಂಗ್ರೆಸ್ ಪಕ್ಷದ ನೇತೃತ್ವದ ಸರ್ಕಾರ ಎಂದು ಹೆಮ್ಮೆಯಿಂದ ಹೇಳಲಿಕ್ಕೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಹೇಳಲಿಕ್ಕೆ ಸಾಧ್ಯವಾಗಿದೆ ಎಂದು ಹೇಳಿದರು. ಹಾಗಾಗಿ ಅ ೩೦ರಂದು ಹಬ್ಬದ ರೀತಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಪಡೆದಂತ ಮಹಿಳೆಯರೊಂದಿಗೆ ಈ ಕಾರ್ಯಕ್ರಮವನ್ನು ವಿಜೃಂಭಣೆಯಿAದ ಸುಮಾರು ೨೫೦ ರಿಂದ ೩೦೦ ಫಲಾನುಭವಿ ಸೇರಿ ನಡೆಸಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪಿ ಡಿ ಓ ಸೋಮಶೇಖರಪ್ಪ,ಗ್ರಾಮ ಪಂಚಾಯಿತಿಯ ಅಧ್ಯಕ್ಷ ಗೋವಿಂದಪ್ಪ, ಉಪಾಧ್ಯಕ್ಷ ಶಕುಂತಲಾ ಬಾಯಿ, ಮುಸೇನಾಳ ಗ್ರಾಮ ಪಂಚಾಯಿತಿ ಸದಸ್ಯ ಪ್ರಕಾಶ್ ನಾಯ್ಕ, ನಟರಾಜಪ್ಪ ಫಲವನಹಳ್ಳಿ, ಮುಸ್ಯೇನಾಳ, ಕೊಡಿಕೊಪ್ಪ, ಕಂಚಿಗೆನಹಳ್ಳಿ ಗ್ರಾಮದಲ್ಲಿ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರುಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು ಸಹ ಉಪಸ್ಥಿತಿಯಲ್ಲಿದ್ದರು.