ಡೆಂಗ್ಯೂ, ಮೆಲೇರಿಯಾಗಳಂತಹ ರೋಗಗಳು ಹೆಚ್ಚು ಹರಡುತ್ತಿದ್ದು, ಸೊಳ್ಳೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ದೇವರಾಜ್ ಪಟಗಿ ತಿಳಿಸಿದರು.
 ಗುರುವಾರ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಯೋಗದೊಂದಿಗೆ ದಾವಣಗೆರೆ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜರುಗಿದ ಕೀಟಜನ್ಯ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಸೊಳ್ಳೆಗಳ ನಿಯಂತ್ರಣ ಕ್ರಮಗಳ ಕುರಿತು ಶಾಲಾ ವಿದ್ಯಾರ್ಥಿಗಳಿಗೆ ಮಾದರಿ ಪ್ರದರ್ಶನ ಹಾಗೂ ಚಿತ್ರಕಲಾ ಪ್ರದರ್ಶನವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಪ್ರಸ್ತುತ ಸೊಳ್ಳೆಗಳಿಂದ ಹರಡುವ ರೋಗಗಳಾದ ಮೆಲೇರಿಯಾ, ಡೆಂಗ್ಯೂ, ಚಿಕನ್‍ಗುನ್ಯಾ, ಮೆದುಳು ಜ್ವರ, ಆನೆಕಾಲು ರೋಗ ಸಾರ್ವಜನಿಕರಿಗೆ ಹೆಚ್ಚು ಕಾಡುತ್ತಿದ್ದು, ಸೊಳ್ಳೆಗಳ ನಿಯಂತ್ರಣ ಕುರಿತು ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು ಎಂದರು.
ಚಿತ್ರಕಲಾ ಮಾದರಿ ಪ್ರದರ್ಶನ: ಮಲೇರಿಯಾ, ಡೆಂಗ್ಯೂ, ಮೆದುಳು ಜ್ವರ ನಿಯಂತ್ರಣ ಕುರಿತು ಶಾಲಾ ಮಕ್ಕಳಿಗೆ ಚಿತ್ರಕಲಾ ಮಾದರಿ ಪ್ರದರ್ಶನ ಏರ್ಪಡಿಸಲಾಯಿತು.
ಜಿಲ್ಲಾ ಕೀಟಜನ್ಯ ರೋಗಗಳ ನಿಯಂತ್ರಣಾಧಿಕಾರಿ ಡಾ. ನಟರಾಜ್.ಕೆ, ವಿಜ್ಞಾನ ಪರಿಷತ್ ಸಂಯೋಜಕ ಗುರುಸಿದ್ದಸ್ವಾಮಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ  ಹೆಚ್.ಉಮಾಪತಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವೆಂಕಟಾಚಲ ಕುಮಾರ್.ಟಿ.ಎಸ್, ತಾಲ್ಲೂಕಿನ ವಿಜ್ಞಾನ ಶಿಕ್ಷಕರು, ವಿದ್ಯಾರ್ಥಿಗಳು, ಆರೋಗ್ಯ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *