ನ್ಯಾಮತಿ: ಪಟ್ಟಣದ ಮಹಾಂತೇಶ್ ಕಲ್ಯಾಣ ಮಂಟಪ ಹಾಗೂ ಎಪಿಎಂಸಿ ಆವರಣದಲ್ಲಿ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅವಳಿ ತಾಲೂಕಿನ ಶಾಸಕರಾದ ಡಿ ಜಿ ಶಾಂತನಗೌಡ್ರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿ ನಂತರ ಮಾತನಾಡಿದ ಅವರು ನಮ್ಮ ಕಾಂಗ್ರೆಸ್ ಪಕ್ಷ ಚುನಾವಣೆ ಪೂರ್ವದಲ್ಲಿ ಐದು ಗ್ಯಾರಂಟಿಗಳನ್ನು ತರುತ್ತೇವೆ ಎಂದು ಮಾತಿನಂತೆ ನಡೆದು ರಾಜ್ಯದಲ್ಲಿ ಮಹಿಳೆಯರು ಆರ್ಥಿಕ ಸಬಲೀಕರಣ ಧ್ಯೇಯದೊಂದಿಗೆ ಕುಟುಂಬದ ಯಜಮಾನನಿಗೆ 2000 ರೂಗಳನ್ನು ನೀಡುವ ಮೂಲಕ ಮಹಿಳೆಯರು ಆರ್ಥಿಕವಾಗಿ ಸಬಲೀಕರಣ ಆಗಬೇಕು ಎಂದು ನಮ್ಮ ಸರ್ಕಾರದ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಹಸಿಲ್ದಾರ್ ಆರ್ ವಿ ಕಟ್ಟಿ, ಗ್ರೇಡ್ 2 ತಹಸಿಲ್ದಾರ್ ಗೋವಿಂದಪ್ಪ, ಶಿಶು ಅಭಿವೃದ್ಧಿ ಅಧಿಕಾರಿ ಮಹಾಂತೇಶ್ ಸ್ವಾಮಿ ಪೂಜಾರ್, ನ್ಯಾಮತಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಗಣೇಶ್ ರಾವ್ ಪಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಡಿಜಿ ವಿಶ್ವನಾಥ್ ನಗರ ಘಟಕದ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಲೋಕೇಶಪ್ಪ ಗುಂದೂರ ,ವನಜಾಕ್ಷಮ್ಮ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಅಲ್ಲಿ ಸೇರಿದ್ದ ಸುಮಾರು 200ಕ್ಕೂ ಹೆಚ್ಚು ಮಹಿಳಾ ಫಲಾನುಭವಿಗಳು ಉಪಸ್ಥಿತಿಯಲ್ಲಿದ್ದರು.

Leave a Reply

Your email address will not be published. Required fields are marked *