ನ್ಯಾಮತಿ: ತಾಲೂಕು ಪಲವನಳ್ಳಿ ಗ್ರಾಮ ಪಂಚಾಯಿತಿಯ ಆವರಣದಲ್ಲಿ ಇಂದು ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯ ಚಾಲನ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿತ್ತು.
ಉದ್ಘಟನೆಯನ್ನು ಪಲವನಹಳ್ಳಿ ಗ್ರಾ ಪಂ ಅಧ್ಯಕ್ಷ ಗೋವಿಂದರಾಜ್ ದೀಪ ಬೆಳಗಿಸಿದರ ಮೂಲಕ ಚಾಲನೆ ನೀಡಿ ನಂತರ ಮಾತನಾಡಿದ ಅವರು ಯಾವುದೇ ಕಾರ್ಯಕ್ರಮಕ್ಕೆ ಹೆಣ್ಣು ಮಕ್ಕಳನ್ನು ಕರೆದರೆ ಬರುತ್ತಿರಲಿಲ್ಲ ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಐದು ಗ್ಯಾರೆಂಟಿ ಯೋಜನೆಗಲ್ಲಿ ಅತ್ಯಂತ ಮುಖ್ಯವಾದ ಪಾತ್ರವಹಿಸಿದ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಪ್ರತಿಯೊಬ್ಬ ಫಲಾನುಭವಿಗೆ ಎರಡು ಸಾವಿರ ಹಣ ಕೊಡಲಿಕ್ಕೆ ಘೋಷಣೆ ಮಾಡಿರುವುದರಿಂದ ದೇಶದಲ್ಲಿ ಪ್ರಥಮ ಬಾರಿಗೆ ಕರ್ನಾಟಕ ರಾಜ್ಯದಲ್ಲಿ ಸ್ತ್ರೀ ಸವಲೀಕರಣಕ್ಕೆ ಮಹತ್ವದ ಹೆಜ್ಜೆಯನ್ನು ಇಟ್ಟು ನಾಂದಿ ಹಾಡಿದ್ದಾರೆ ಎಂದು ತಿಳಿಸಿದರು.
ತದಾದ ನಂತರ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಪ್ರಕಾಶ್ ನಾಯ್ಕ ಮತ್ತು ಪ್ರವೀಣ್ ಗಂಜಿನಹಳ್ಳಿ ಇಬ್ಬರು ಮಾತನಾಡಿ ನಮ್ಮ ಕಾಂಗ್ರೆಸ್ ಪಕ್ಷ ಚುನಾವಣೆಯ ಪೂರ್ವದಲ್ಲಿ ನಮ್ಮ ಸರ್ಕಾರ ಬಂದರೆ ಐದು ಗ್ಯಾರೆಂಟಿ ಯೋಜನೆಗಳನ್ನ ತರುತ್ತೇವೆ ಎಂದು ಮಾತು ಕೊಟ್ಟಿದ್ದೆವು. ಅದೇ ರೀತಿ ಮಾತಿನಂತೆ ನಡೆದ ಯಾವುದಾದರೂ ಸರ್ಕಾರ ಇದ್ದರೆ ಅದು ನಮ್ಮ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರ ಎಂದು ಬಣ್ಣಿಸಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಶಕುಂತಲಾ ಬಾಯಿ, ಪಿಡಿಒ ಸೋಮಶೇಖರ್, ನೋಡಲ್ ಆಫೀಸರ್ ವಿಶ್ವ ನಟೇಶ್, ಮಾಜಿ ಗ್ರಾ ಪಂ ಅಧ್ಯಕ್ಷರಾದ ಅನಿತಾ ರಾಜಪ್ಪ. ನಾಗೇಶ್ ನಾಯ್ಕ, ನಟರಾಜಪ್ಪ ಜಯಶ್ರೀ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರು ಅಲ್ಲಿ ಸೇರಿರುವ ಸುಮಾರು 300ಕ್ಕೂ ಹೆಚ್ಚು ಫಲಾನುಭವಿಗಳು ಸಹ ಭಾಗಿಯಾಗಿದ್ದರು.