ಸೆಪ್ಟೆಂಬರ್ 4 ರಂದು ಬೆಳಿಗ್ಗೆ 9 ಗಂಟೆಗೆ ದಾವಣಗೆರೆ ನಗರದ ಸಿ.ಜಿ. ಆಸ್ಪತ್ರೆ ಮುಂಭಾಗ ಇಲ್ಲಿ ಯುವಜನೋತ್ಸವ-2023ರ ಪ್ರಯುಕ್ತ ಮ್ಯಾರಥಾನ್ ಸ್ಪರ್ಧೆ ಏರ್ಪಡಿಸಲಾಗಿದೆ.
ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಕೋಶ ಘಟಕ, ರಕ್ತ ಭಂಡಾರ, ಚಿಗಟೇರಿ ಜಿಲ್ಲಾ ಆಸ್ಪತ್ರೆ, ಶಾಲಾ ಶಿಕ್ಷಣ ಇಲಾಖೆ, ಯುವಜನ ಮತ್ತು ಕ್ರೀಡಾ ಇಲಾಖೆ, ಎನ್.ಎಸ್.ಎಸ್. ಮತ್ತು ಜಿಲ್ಲೆಯ ವಿವಿಧ ರಕ್ತ ಕೇಂದ್ರಗಳು, ಜಿಲ್ಲಾ ಆರ್.ಆರ್.ಸಿ ಕಾಲೇಜುಗಳು ಹಾಗೂ ವಿವಿಧ ಸ್ವಯಂ ಸೇವಾಸಂಘ ಸಂಸ್ಥೆಗಳು ದಾವಣಗೆರೆ ಇವರ ಸಹಯೋಗದಲ್ಲಿ ಆಯೋಜಿಸಲಾದ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ ಬಿ ಇಟ್ನಾಳ್ ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಷಣ್ಮುಖಪ್ಪ, ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಅಧೀಕ್ಷಕರಾದ ಡಾ.ನಾಗೇಂದ್ರಪ್ಪ.ಎಂ.ಬಿ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಅಧೀಕ್ಷಕರಾದ ಡಾ.ಮಧು.ಎಸ್.ಪಿ, ಚಿಗಟೇರಿ ಜಿಲ್ಲಾ ಆಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ.ಎಸ್.ಕೆ ನಾಗವೇಣಿ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕದ ಜಿಲ್ಲಾ ಕಾರ್ಯಕ್ರಮದ ಅಧಿಕಾರಿ ಡಾ.ಪಿ.ಡಿ.ಮುರಳೀಧರ, ಸಿ.ಜಿ.ಆಸ್ಪತ್ರೆಯ ಎ.ಆರ್.ಟಿ ಪ್ಲಸ್‍ನ ನೊಡೇಲ್ ಅಧಿಕಾರಿ ಡಾ.ಕೆ ಶಿವರಾಜ್, ರಕ್ತ ಭಂಡಾರದ ವೈದ್ಯಾಧಿಕಾರಿ ಡಾ.ಡಿ.ಹೆಚ್ ಗೀತಾ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೊಟ್ರೇಶ್.ಜಿ, ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ಸಂಯೋಜಕರಾದ ಪ್ರಶಾಂತ ಪಾಲ್ಗೋಳುವರು.