ನಗರದ ಆರೋಗ್ಯ ಕೇಂದ್ರಗಳಲ್ಲಿ 5 ವರ್ಷದ ಒಳಗಿನ ಲಸಿಕೆ ವಂಚಿತ ಮಕ್ಕಳನ್ನು ಗುರುತಿಸಿ ಲಸಿಕೆ ನೀಡುವ ಕಾರ್ಯವಾಗಬೇಕೆಂದು ತಾಲ್ಲೂಕು ತಹಶೀಲ್ದಾರ್ ಡಾ. ಅಶ್ವಥ್ ತಿಳಿಸಿದರು.
ಶುಕ್ರವಾರ ದಾವಣಗೆರೆ ತಾಲ್ಲೂಕು ತಹಶಿಲ್ದಾರ್ ಕಛೇರಿ ಸಭಾಂಗಣದಲ್ಲಿ ಜರುಗಿದ ಇಂಧ್ರ ಧನುಷ್ ಲಸಿಕಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಇಂಧ್ರ ಧನುಷ್ ಅಭಿಯಾನವು ಕೇಂದ್ರÀ ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದೆ. ನಗರ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ವಂಚಿತ ಮಕ್ಕಳನ್ನು ಗುರುತಿಸಿ ಕರೆತರುವಂತೆ ಅಂಗನವಾಡಿ ಮೇಲ್ವಿಚಾರಕರು ಹಾಗೂ ಪಾಲಿಕೆಯವರು ಹೆಚ್ಚಿನ ಜವಾಬ್ದಾರಿ ಕೈಗೊಳ್ಳಬೇಕು ಎಂದು ತಿಳಿಸಿದರು. ಅಂಗನವಾಡಿ ವ್ಯಾಪ್ತಿಯಲ್ಲಿನ ಮಕ್ಕಳನ್ನು ಆಶಾ ಕಾರ್ಯಕರ್ತೆಯರು ಸಮೂಹವಾಗಿ ಸಮೀಕ್ಷೆ ನಡೆಸಿ ಲಸಿಕೆ ವಂಚಿತ ಮಕ್ಕಳನ್ನು ಲಸಿಕಾ ಕೇಂದ್ರಗಳಿಗೆ ಕರೆತರುವಂತೆ ಸಂಬಂಧಿತ ಎಲ್ಲಾ ಅಧಿಕಾರಿಗಳು ಜವಾಬ್ದಾರಿವಹಿಸಕೊಳ್ಳಬೇಕೆಂದರು.
ಆರ್.ಸಿ.ಹೆಚ್.ಅಧಿಕಾರಿ ಡಾ. ರೇಣುಕಾರಾಧ್ಯ ಮಾತನಾಡಿ ಇಂಧ್ರ ಧನುಷ್ ಲಸಿಕೆ ಕಾರ್ಯಕ್ರಮವು ಸೆ.11 ರಿಂದ 16 ರವರೆಗೆ ಲಸಿಕೆ ವಂಚಿತ 5 ವರ್ಷದ ಒಳಗಿನ ಮಕ್ಕಳಿಗೆ ಲಸಿಕೆಯನ್ನು ಹಾಕಿಸಬೇಕು ಎಂದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ. ದೇವರಾಜ ಪಿ ಪಟಗೆ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಹೆಚ್.ಉಮಾಪತಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.