ಮಾಯಕೊಂಡದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ವಸತಿಯುತ ಪ್ರತಿಭಾನ್ವಿತ ಬಾಲಕಿಯರ ಪ್ರೌಢಶಾಲೆಯಲ್ಲಿ ಮಂಗಳವಾರ ರಾತ್ರಿ ಊಟದ ನಂತರ ಕೆಲ ವಿದ್ಯಾರ್ಥಿಗಳ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು, ಸೆ.೬ ರಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುರೇಶ್ ಇಟ್ನಾಳ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಂಗಳವಾರ ರಾತ್ರಿಯ ಊಟಕ್ಕೆ ಮಾಡಲಾದ ಅನ್ನ ಸರಿಯಾಗಿ ಬೇಯಿಸದ ಕಾರಣ ಕೆಲ ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು ಕಾಣಿಸಿಕೊಂಡಿರುತ್ತದೆ. ಈ ವಿದ್ಯಾರ್ಥಿಗಳನ್ನು ತಕ್ಷಣ ಸಿ.ಜಿ ಆಸ್ಸತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿರುತ್ತದೆ. ವಿದ್ಯಾರ್ಥಿನಿಯರ ಹೆಚ್ಚು ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದ್ದು, ಯಾವುದೇ ಅಪಾಯ ಇರುವುದಿಲ್ಲ. ಮಕ್ಕಳ ಪೋಷಕರಿಗೂ ಸಹ ಮಾಹಿತಿಯನ್ನು ನೀಡಲಾಗಿದೆ.
ಜಿಲ್ಲಾಧಿಕಾರಿ ಹಾಗೂ ಸಿ.ಇ.ಒ ವಸತಿ ಶಾಲೆಯಲ್ಲಿನ ಅಡುಗೆ ಮನೆ, ಉಗ್ರಾಣ ಪರಿಶೀಲನೆ ನಡೆಸಿ ಸ್ವಚ್ಚತೆ ಕಾಪಾಡಲು ಸೂಚನೆ ನೀಡಿದರು. ನಿರ್ಲಕ್ಷö್ಯತೆ ವಹಿಸಿದ ಈ ವಸತಿ ಶಾಲೆಯ ವಾರ್ಡನ್ ಅವರನ್ನು ತಕ್ಷಣ ಬದಲಾಯಿಸಲು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ಸೂಚನೆ ನೀಡಿದರು. ಈ ವೇಳೆ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ನಾಗರಾಜ್.ಕೆ ಉಪಸ್ಥಿತರಿದ್ದರು.
ಸಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ: ಮಾಯಕೊಂಡ ವಸತಿಯುತ ಪ್ರೌಢಶಾಲೆಯಲ್ಲಿ ಮಂಗಳವಾರ ರಾತ್ರಿ ಊಟದ ನಂತರ ೧೫ ವಿದ್ಯಾರ್ಥಿನಿಯರಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯಾರ್ಥಿನಿಯರು ಗುಣಮುಖರಾಗುತ್ತಿದ್ದು ಬುಧವಾರ ಮಾಯಕೊಂಡ ಶಾಸಕರಾದ ಕೆ.ಎಸ್ ಬಸವಂತಪ್ಪ, ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.