ನ್ಯಾಮತಿ: ಸೆ. ೧೫ರಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಆವರಣದಲ್ಲಿ ನಡೆಸಲು ಉದ್ದೇಶಿಸಿರುವ ಅಂಗವಾಗಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ತಾಲೂಕು ಕಚೇರಿ ಆವರಣದಲ್ಲಿ ತಹಸಿಲ್ದಾರ್ ಎಚ್ ಬಿ ಗೋವಿಂದಪ್ಪರವರ ಅಧ್ಯಕ್ಷತೆಯಲ್ಲಿ ನಡೆಯಿತು. ಬಿಇಒ ನಂಜರಾಜ್,
ಸಮಾಜ ಕಲ್ಯಾಣ ಅಧಿಕಾರಿ ಉಮಾ, ದೇವರಾಜ್ ಅರಸು ಹಿಂದುಳಿದ ವರ್ಗದ ಅಧಿಕಾರಿ ಮೃತ್ಯುಂಜಯ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಗಣೇಶರಾವ್ ಪಿ, ನ್ಯಾಮತಿ ತಾಲೂಕ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ನಿಂಗಪ್ಪ, ಹಾಗೂ ತಾಲೂಕ್ ಮಟ್ಟದ ಅಧಿಕಾರಿ ವರ್ಗದವರು ಸಹ ಭಾಗಿಯಾಗಿದ್ದರು.