ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ಕುರಿತು ಸಾರ್ವಜನಿಕರಲ್ಲಿ ಸಂಚಾರಿ ರಥ ಪ್ರದರ್ಶನದ ಮೂಲಕ ಜಾಗೃತಿ ಮೂಡಿಸಲು ಟಾಟಾ ಎಸ್ ವಾಹನ ಮಾಲೀಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ 6 ತಾಲ್ಲೂಕುಗಳ ಎಲ್ಲಾ 220 ಗ್ರಾಮ ಪಂಚಾಯಿತಿಗಳಲ್ಲಿರುವ ಎಸ್.ಸಿ, ಎಸ್.ಟಿ ಕಾಲೋನಿಗಳಲ್ಲಿ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು, ಎರಡು ಟಾಟಾ ಎಸ್ ವಾಹನಗಳು ಅವಶ್ಯಕತೆ ಇರುವುದರಿಂದ ಆಸಕ್ತ ವಾಹನ ಮಾಲೀಕರು ಸೆಪ್ಟೆಂಬರ್ 27 ರ ಸಂಜೆ 5 ಗಂಟೆಯೊಳಗಾಗಿ ಮುಚ್ಚಿದ ಲಕೋಟೆಯಲ್ಲಿ ದರಪಟ್ಟಿಯನ್ನು ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಕಚೇರಿಗೆ ಸಲ್ಲಿಸಬೇಕು ಎಂದು ಕಚೇರಿಯ ಸಹಾಯಕ ಕಾರ್ಮಿಕ ಆಯುಕ್ತ ಹಾಗೂ ಸದಸ್ಯ ಕಾರ್ಯದರ್ಶಿ ವೀಣಾ ತಿಳಿಸಿದ್ದಾರೆ.

Leave a Reply

Your email address will not be published. Required fields are marked *