ನ್ಯಾಮತಿ ತಾಲೂಕು ಗುಡ್ಡಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಸೆ 25 ರಂದು ಬೆಳಿಗ್ಗೆ 11 ಗಂಟೆಗೆ ಸರಿಯಾಗಿ ಶಾಸಕ ಡಿ ಜಿ ಶಾಂತನಗೌಡ್ರು ನೇತೃತ್ವದಲ್ಲಿ ಜನತಾದರ್ಶನ ನಡೆಸಲು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಇಂದು ಪೂರ್ವಭಾವಿ ಸಭೆಯನ್ನು ನಡೆಸಲಾಯಿತು ಎಂದು ತಹಿಶಿಲ್ದಾರ್ ಎಚ್ ಬಿ ಗೋವಿಂದಪ್ಪ ತಿಳಿಸಿದರು.
ತಾಲೂಕ ಕಚೇರಿಯಲ್ಲಿ ಸಭೆ ಉದ್ದೇಶಿಸಿ ತಹಶೀಲ್ದಾರ್ ಎಚ್ ಬಿ ಗೋವಿಂದಪ್ಪ ನಂತರ ಮಾತನಾಡಿ ಗುಡ್ಡಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹೊಸಕೊಪ್ಪ, ಗುಡ್ಡಹಳ್ಳಿ ನೆರಿಗೆನಕೆರೆ ,ಗುಡ್ಡಹಳ್ಳಿ ತಾಂಡ. ಜೀನಹಳ್ಳಿ ಸುತ್ತಮುತ್ತಲಿನ ಗ್ರಾಮಗಳ ಜನರು ಜನತಾದರ್ಶನದಲ್ಲಿ ಪಾಲ್ಗೊಂಡು ತಮ್ಮ ಅಹವಾಲುಗಳನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬಹುದು ಹಾಗಾಗಿ ಈ ಭಾಗದ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ಸಾರ್ವಜನಿಕರಲ್ಲಿ ವಿನಂತಿಸಿಕೊಂಡಿದ್ದಾರೆ. ಜನತಾದರ್ಶನದಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ತಾಲೂಕ ಪಂಚಾಯತಿ ಇಇಒ ರಾಘವೇಂದ್ರ, ಬಿಇಓ ನಂಜುರಾಜ್, ಪಟ್ಟಣ ಪಂಚಾಯಿತಿ ಅಧಿಕಾರಿ ಗಣೇಶ ರಾವ್ ಪಿ,ಸಿಡಿಪಿಓ ಮಹಾಂತೇಸ್ವಾಮಿ ಪೂಜಾರ, ದೇವರಾಜ್ ಅರಸ್ ಹಿಂದುಳಿದ ವರ್ಗದ ಅಧಿಕಾರಿ ಮೃತ್ಯುಂಜಯ ಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಉಮಾ, ಬೆಸ್ಕಾಂ ಕಾರ್ಯ ನಿರ್ವಹಣಾಧಿಕಾರಿ ಬಿ ಕೆ ಶ್ರೀನಿವಾಸ್, ಇನ್ನು ತಾಲೂಕು ಮಟ್ಟದ ಅಧಿಕಾರಿ ಸಿಬ್ಬಂದಿ ವರ್ಗದವರು ಸಹ ಭಾಗವಹಿಸಿದ್ದರು.

Leave a Reply

Your email address will not be published. Required fields are marked *