ಆಕಾಶವಾಣಿ ಭದ್ರಾವತಿ ಹಾಗೂ ಕುವೆಂಪು ವಿಶ್ವವಿದ್ಯಾನಿಲಯದ ಡಾ. ಬಿ.ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಸೆಪ್ಟೆಂಬರ್ 26ರಿಂದ ಪ್ರತಿ ಮಂಗಳವಾರ ಬೆಳಿಗ್ಗೆ 7.15 ಗಂಟೆಗೆ ವಿಶ್ವಜ್ಞಾನಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆ ಕುರಿತು ವಿಶೇಷ ಉಪನ್ಯಾಸ ಪ್ರಸಾರವಾಗಲಿದೆ.
ಕುವೆಂಪು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರು, ವಿಷಯ ತಜ್ಞರು 15 ನಿಮಿಷಗಳ ಕಾಲ ಉಪನ್ಯಾಸ ನೀಡಲಿದ್ದು, ಪ್ರತಿ ಕಾರ್ಯಕ್ರಮದ ಕೊನೆಯಲ್ಲಿ ಪ್ರಶ್ನೆಯನ್ನು ಕೇಳಲಾಗುವುದು, ಇದಕ್ಕೆ ಸರಿ ಉತ್ತರ ನೀಡಿದವರಿಗೆ ಬಹುಮಾನ ನೀಡಿ ಪುರಸ್ಕರಿಸಲಾಗುತ್ತದೆ. ಉತ್ತರವನ್ನು ಆಕಾಶವಾಣಿ ಭದ್ರಾವತಿ ಕೇಂದ್ರ ಅಥವಾ ನಿಲಯ ವಾಟ್ಸಪ್ ಸಂಖ್ಯೆ 9481572600 ಗೆ ಕಳುಹಿಸಬೇಕು.
ಕಾರ್ಯಕ್ರಮವು ಭದ್ರಾವತಿ ಆಕಾಶವಾಣಿಯ FM103.5 ಹಾಗೂ MW675Khz ನಲ್ಲಿ ಹಾಗೂ ವಿಶ್ವದಾದ್ಯಂತ prasarabharati newsonair app ನಲ್ಲಿ ಭದ್ರಾವತಿ ಕೇಂದ್ರದ ಮೂಲಕ ಪ್ರಸಾರ ಸಮಯದಲ್ಲಿ ಹಾಗೂ ಪ್ರಸಾರ ನಂತರ ಆಕಾಶವಾಣಿ ಭದ್ರಾವತಿ ಯುಟ್ಯೂಬ್ ಚಾನೆಲ್ ನಲ್ಲಿ ಕೇಳಬಹುದು ಎಂದು ಭದ್ರಾವತಿ ಆಕಾಶವಾಣಿ ಕಾರ್ಯಕ್ರಮ ಮುಖ್ಯಸ್ಥರಾದ ಎಸ್.ಆರ್.ಭಟ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *