ಮಾನ್ಯ ಮುಖ್ಯಮಂತ್ರಿಗಳ ಸೂಚನೆ ಅನ್ವಯ ಜಿಲ್ಲಾ ಮಟ್ಟದಲ್ಲಿ ಪ್ರತಿ ತಿಂಗಳು ಜನತ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಂಡು ಸಾರ್ವಜನಿಕ ಕುಂದು ಕೊರತೆಗಳನ್ನು ನಿರ್ವಹಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಅಧ್ಯಕ್ಷತೆಯಲ್ಲಿ ದಾವಣಗೆರೆÀ ತಾಲ್ಲೂಕಿನÀ ಕಡ್ಲೆಬಾಳು ಗ್ರಾಮದಲ್ಲಿ ಸೆ.೨೫ ರಂದು ಸಾರ್ವಜನಿಕ ಕುಂದುಕೊರೆತೆ ಆಲಿಸಲು ಜನತಾ ದರ್ಶನ ಕಾರ್ಯಕ್ರಮ ನಡೆಯಲಿದೆ.
ಈ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಸ್ವೀಕರಿಸಿ ಸ್ಥಳದಲ್ಲಿಯೇ ಪರಿಹಾರ ಕಂಡುಕೊಳ್ಳಲಾಗುತ್ತದೆ. ಜನತಾ ದರ್ಶನ ಕಾರ್ಯಕ್ರಮದಲ್ಲಿ ಸ್ವೀಕೃತವಾದ ಎಲ್ಲಾ ಅರ್ಜಿಗಳನ್ನು ಸಾರ್ವಜನಿಕ ಕುಂದುಕೊರತೆಯ ನಿವರಣೆ ವ್ಯವಸ್ಥೆಯನ್ನು (IPಉಖSs) ತಂತ್ರಾAಶದಲ್ಲಿ ದಾಖಲಸಿ ಕುಂದುಕೊರತೆಗಳನ್ನು ದಾಖಲಿಸಲು ಇಲಾಖಾವಾರು ಪ್ರತ್ಯೇಕ ಕೌಂಟರ್‌ಗಳನ್ನು ತೆರೆಯಲಾಗುತ್ತದೆ. ಸಾರ್ವಜನಿಕರು ಜನತ ದರ್ಶನ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳಲು ಅವರು ತಿಳಿಸಿದ್ದಾರೆ.