ನ್ಯಾಮತಿ: ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ವೇಳಾಪಟ್ಟಿಯಲ್ಲಿ ಸೂಚಿಸಿರುವಂತೆ ಮತದಾರ ಪಟ್ಟಿಯನ್ನು ತಯಾರಿಸುವ ಕುರಿತು ತಹಸಿಲ್ದಾರ್ ಇವರ ಅಧ್ಯಕ್ಷತೆಯಲ್ಲಿ ತಾಲೂಕಿನ ಎಲ್ಲಾ ರಾಜಕೀಯ ಪಕ್ಷಗಳು ಮುಖಂಡರು ಹಾಗೂ ಪ್ರಾಂಶುಪಾಲರು ಮತ್ತು ಮುಖ್ಯೋಪಾಧ್ಯಾಯರವರಿಗೆ ಸಭೆಯನ್ನು ಕರೆಯಲಾಗಿದ್ದು, ಸೆ 29ರಂದು ಶುಕ್ರುವಾರ ಮಧ್ಯಾಹ್ನ 3 ಗಂಟೆಗೆ ನ್ಯಾಮತಿ ತಾಲೂಕಿನ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದು ಸದರಿ ಸಭೆಗೆ ಹಾಜರಾಗಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಕೋರಿದ್ದಾರೆ.