ನ್ಯಾಮತಿ: ಪಟ್ಟಣ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿದ್ದ ಸ್ವಚ್ಛತೆ ಹೀ ಸೇವಾ ಅಡಿಯಲ್ಲಿ ನಗರದಲ್ಲಿರುವ ಬನಶಂಕರಿ ದೇವಸ್ಥಾನದ ಹಿಂಭಾಗದಲ್ಲಿರುವ ಕೆರೆಯ ಏರಿಯ ಮೇಲೆ ಶಾಸಕ ಡಿ ಜಿ ಶಾಂತನಗೌಡ್ರು ಶ್ರಮದಾನ ಮಾಡುವುದರ ಮೂಲಕ ಸ್ವಚ್ಛತೆಯ ಕಾರ್ಯಕ್ಕೆ ಚಾಲನೆ ನೀಡಿದರು. ನಂತರ ಪಟ್ಟಣದಲ್ಲಿರುವ ಸಾರ್ವಜನಿಕರಿಗೆ ಪಟ್ಟಣವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಮನವಿ ಮಾಡಿ ಪಟ್ಟಣ ಪಂಚಾಯಿತಿಯ ಪೌರ ಕಾರ್ಮಿಕರಿಗೆ ಉಡುಗೊರೆ ಕೊಡುವುದರೊಂದಿಗೆ ಅವರುಗಳಿಗೆ ಸನ್ಮಾನಿಸಿದರು.