ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಅಕ್ಟೋಬರ್ 26 ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯನ್ನು ಏರ್ಪಡಿಸಲಾಗಿದೆ.
ರಹದಾರಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 13 ಕೊನೆಯ ದಿನವಾಗಿದ್ದು, ನಂತರ ಬಂದ ಅರ್ಜಿಗಳನ್ನು ಸಭೆಯಲ್ಲಿ ಮಂಡಿಸಲಾಗುವುದಿಲ್ಲ. ಅರ್ಜಿ ಸಲ್ಲಿಸಿದ ರಹದಾರಿದಾರರು ಸಭೆಯಲ್ಲಿ ಸಂಬಂಧಿತ ದಾಖಲೆಗಳೊಂದಿಗೆ ಸಭೆಗೆ ಹಾಜರಾಗಬೇಕು ಎಂದು ದಾವಣಗೆರೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಶ್ರೀಧರ್ ತಿಳಿಸಿದ್ದಾರೆ.