ದಾವಣಗೆರೆ; ಅ.4 : ಕೀಟಜನ್ಯ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ಸಾರ್ವಜನಿಕ ಜಾಗೃತಿ ಅಗತ್ಯವಾದುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್ ಷಣ್ಮುಖಪ್ಪ ತಿಳಿಸಿದ್ದಾರೆ.
ಕೀಟಜನ್ಯ ರೋಗಗಳ ನಿಯಂತ್ರಣಕ್ಕಾಗಿ ಸಮುದಾಯದಲ್ಲಿ ಜಾಗೃತಿ ಮೂಡಿಸಲು ಮತ್ತು ಸಾರ್ವಜನಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ಮನೆ-ಮನೆ ಭೇಟಿ ನೀಡಿ ಜ್ವರ ಸಮೀಕ್ಷೆ ಮತ್ತು ಲಾರ್ವಾ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಹೆಚ್ಚಿನ ಜ್ವರ ಪ್ರಕರಣಗಳು ಕಂಡುಬಂದಲ್ಲಿ ರಕ್ತದ ಮಾದರಿ, ರಕ್ತಲೇಪನ ಸಂಗ್ರಹಿಸಿ ಪರೀಕ್ಷೆಗೊಳಪಡಿಸಲಾಗುತ್ತದೆ. ವಿಶೇಷವಾಗಿ ವಲಸಿಗರ ಕಾವಲು ಸಮೀಕ್ಷೆಯನ್ನು ನಡೆಸಲಾಗುತ್ತಿದ್ದು, ಈ ವರ್ಷ ವಲಸಿಗರಲ್ಲಿ 9 ಮಲೇರಿಯಾ ಪ್ರಕರಣಗಳು ಕಂಡುಬಂದಿವೆ.