ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-2ಎ ರಲ್ಲಿನ ಸವಿತಾ ಮತ್ತು ಅದರ ಉಪಜಾತಿಗೆ ಸೇರಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ನಿಯಮಿತ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿ ಅಥವಾ ನಿಗಮದ ವೆಬ್‍ಸೈಟ್ ತಿತಿತಿ.ಞssಜ.ಞಚಿಡಿಟಿಚಿಣಚಿಞಚಿ.gov.iಟಿ ನ್ನು ಸಂಪರ್ಕಿಸಬಹುದು.
ಅರ್ಜಿ ನಮೂನೆಯನ್ನು ನಿಗಮದ ವೆಬ್‍ಸೈಟ್‍ನಲ್ಲಿ ಹಾಗೂ ಉಚಿತವಾಗಿ ಜಿಲ್ಲಾ ಕಚೇರಿಯಲ್ಲಿ ಪಡೆಯಬಹುದು. ನಿಗದಿತ ಅರ್ಜಿ ನಮೂನೆಗಳಲ್ಲಿ ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ನವಂಬರ್ 3 ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನಿಗಮದ ಕಚೇರಿ ದೂರವಾಣಿ ಸಂಖ್ಯೆ 08192-230934 ಕ್ಕೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಸಾತ್ವಿಕ್ ತಿಳಿಸಿದ್ದಾರೆ.