ಕೇಂದ್ರ ಸರ್ಕಾರದ ಆತ್ಮ ನಿರ್ಭರ್ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳು ವ್ಯಾಪಾರ ವಿಸ್ತರಿಸಿಕೊಳ್ಳಲು ಬ್ಯಾಂಕ್ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಕಿರು ಸಾಲ ಸೌಲಭ್ಯ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ.
ಬೀದಿ ಬದಿ ವ್ಯಾಪಾರಿಗಳಿಗೆ ಹಾಗೂ ಹಾಲು ಮಾರಾಟಗಾರರಿಗೆ ಮತ್ತು ಪತ್ರಿಕಾ ವಿತರಕರಿಗೂ ಆರ್ಥಿಕ ಸುಭದ್ರತೆಗಾಗಿ 3 ಕಂತುಗಳಲ್ಲಿ ಸಾಲ ಸೌಲಭ್ಯವನ್ನು ಕಲ್ಪಿಸಲಾಗುವುದು. ಮೊದಲ ಕಂತಿನಲ್ಲಿ ರೂ 10,000 ಸಾಲ ನೀಡಿ 12 ತಿಂಗಳ ಅವಧಿಯಲ್ಲಿ ಸಾಲ ಮರು ಪಾವತಿ ಮಾಡಿದಲ್ಲಿ ರೂ 20,000 ಸಾಲ ನೀಡಲಾಗುವುದು. ಪಡೆದ ಸಾಲವನ್ನು 18 ತಿಂಗಳ ಅವಧಿಯಲ್ಲಿ ಸಾಲ ಮರು ಪಾವತಿ ಮಾಡಿದಲ್ಲಿ ರೂ 50,000 ಸಾಲ ಸೌಲಭ್ಯ ನೀಡಲಾಗುವುದು.
ಸಾಲ ಸೌಲಭ್ಯದ ಜೊತೆಗೆ ಕ್ಯೂ ಆರ್ ಕೋಡ್ ಮಾಡಿಸಿಕೊಳ್ಳಬೇಕು, ನಗರ ಸ್ಥಳೀಯ ಸಂಸ್ಥೆಗಳಿಂದ ಕೈಗೊಳ್ಳಲಾಗುವ ಸಮೀಕ್ಷೆಗೊಳಗಾಗಿ ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯವನ್ನು ಪಡೆದುಕೊಳ್ಳುಬೇಕು. ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಮಯದಲ್ಲಿ ಸಂಬಂಧಪಟ್ಟ ಶಾಖೆಯಲ್ಲಿ ವಿಚಾರಿಸಬಹುದು ಎಂದು ಹರಿಹರ ನಗರ ಸಭೆ ಪೌರಾಯುಕ್ತರಾದ ಬಸವರಾಜಪ್ಪ ತಿಳಿಸಿದ್ದಾರೆ.