ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಅಕ್ಟೋಬರ್ ಮಾಹೆಯಲ್ಲಿ ಬಿಡುಗಡೆಯಾದ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ.
ಅಂತ್ಯೋದಯ ಪಡಿತರ ಚೀಟಿದಾರರಿಗೆ 21 ಕೆ.ಜಿ ಅಕ್ಕಿ ಮತ್ತು ರಾಗಿ 14ಕೆ.ಜಿ ಪ್ರತಿ ಕಾರ್ಡಿಗೆ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆÉ 3ಕೆ.ಜಿ ಅಕ್ಕಿ ಮತ್ತು ಪ್ರತಿ ಸದಸ್ಯರಿಗೆ 2ಕೆ.ಜಿ ರಾಗಿ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪ್ರತಿ ಕೆ.ಜಿ ಗೆ ರೂ.15ರಂತೆ ಒಪ್ಪಿಗೆ ನೀಡಿದ ಎ.ಪಿ.ಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5ಕೆ.ಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು.
ಸರ್ಕಾರದ ಗ್ಯಾರಂಟಿ ಯೋಜನೆಯಡಿ 5ಕೆ.ಜಿ ಅಕ್ಕಿ ಬದಲಾಗಿ ಡಿ.ಬಿ.ಟಿ ಮೂಲಕ ಹಣ ವರ್ಗಾವಣೆ ಮಾಡುತ್ತಿದ್ದು, ಹಣ ಪಡೆಯಲು ಯಾವುದೇ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ತಮ್ಮ ಬ್ಯಾಂಕ್ ಅಥವಾ ಸ್ಥಳೀಯ ಅಹಾರ ನಿರೀಕ್ಷಕರನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳಬಹುದೆಂದು ಜಿಲ್ಲಾ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಯ ಉಪ ನಿರ್ದೇಶಕ ಶಿದ್ರಾಮ ಮಾರಿಹಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *