ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಅ.12 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಪಕ್ಕದಲ್ಲಿರುವ ಪ್ರಭಂಜನ ಅಂಡ್ ಕಂಪನಿಯಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ವರಿ ಎನ್. ಹೆಗಡೆ ಉದ್ಘಾಟಿಸಲಿದ್ದು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಷಣ್ಮುಖಪ್ಪ ಎಸ್. ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ ಮಹಾವೀರ ಮ, ಕರೆಣ್ಣವರ, ಜಿಲ್ಲಾ ಕುಷ್ಟರೋಗ ನಿವಾರಣಾಧಿಕಾರಿ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ. ಮಂಜುನಾಥ್ ಎಲ್. ಪಾಟೀಲ್, ಹಿರಿಯ ನ್ಯಾಯವಾದಿ ಮತ್ತು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್ ಅರುಣ್ ಕುಮಾರ್, ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ಜಿಲ್ಲಾ ಅಧಿಕಾರಿ ಡಾ. ಕೆ.ಕೆ ಪ್ರಕಾಶ್, ಜಿಲ್ಲಾ ಕಾರ್ಮಿಕ ಅಧಿಕಾರಿ ಜಿ. ಇಬ್ರಾಹಿಂ ಸಾಬ್, ಜಿಲ್ಲಾ ಮನೋವೈದ್ಯ ಡಾ. ಮರಳಸಿದ್ದಪ್ಪ ಪಿ.ಎಂ ಉಪಸ್ಥಿತರಿರುವರು.

Leave a Reply

Your email address will not be published. Required fields are marked *