ದಾವಣಗೆರೆ ತಾಲ್ಲೂಕಿನ ಬೆಳವನೂರು ಗ್ರಾಮದಲ್ಲಿ ಅಕ್ಟೋಬರ್ 25 ರಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.
ಈ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಸ್ವೀಕರಿಸಿ ಸ್ಥಳದಲ್ಲಿಯೇ ಪರಿಹಾರ ಕಂಡುಕೊಳ್ಳಲಾಗುತ್ತದೆ. ಜನತಾ ದರ್ಶನ ಕಾರ್ಯಕ್ರಮದಲ್ಲಿ ಸ್ವೀಕೃತವಾದ ಎಲ್ಲಾ ಅರ್ಜಿಗಳನ್ನು ಸಾರ್ವಜನಿಕ ಕುಂದುಕೊರತೆಯ ನಿವಾರಣೆ ವ್ಯವಸ್ಥೆಯ (IPಉಖS) ತಂತ್ರಾಂಶದಲ್ಲಿ ದಾಖಲಾಸಲಾಗುತ್ತದೆ ಇದಕ್ಕಾಗಿ ಕುಂದುಕೊರತೆಗಳನ್ನು ದಾಖಲಿಸಲು ಇಲಾಖಾವಾರು ಪ್ರತ್ಯೇಕ ಕೌಂಟರ್‍ಗಳನ್ನು ತೆರೆಯಲಾಗುತ್ತದೆ. ಸಾರ್ವಜನಿಕರು ಜನತಾ ದರ್ಶನ ಸದುಪಯೋಗ ಮಾಡಿಕೊಳ್ಳುವಂತೆ ತಿಳಿಸಿದ್ದಾರೆ.