2022-23ನೇ ಸಾಲಿನ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಗಳನ್ನು ತುಮಕೂರು ಜಿಲ್ಲಾ ಕ್ರೀಡಾಂಗಣದಲ್ಲಿ ಅಕ್ಟೋಬರ್ 27 ರಿಂದ 29 ರವರೆಗೆ ಆಯೋಜಿಸಲಾಗಿದೆ.
ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ಮತ್ತು ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ಈಗಾಗಲೇ ಆನ್‍ಲೈನ್‍ನಲ್ಲಿ ನೋಂದಣಿ ಮಾಡಿಕೊಂಡ ಕ್ರೀಡಾಪಟುಗಳು ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ.
ಅರ್ಹ ಕ್ರೀಡಾಪಟುಗಳು ಅಕ್ಟೋಬರ್ 27 ರಂದು ಬೆಳಿಗ್ಗೆ 9 ಗಂಟೆಯೊಳಗಾಗಿ ತುಮಕೂರು ಜಿಲ್ಲಾ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಾವಣಗೆರೆ ಇಲ್ಲಿ ಅಥವಾ ದೂ. ಸಂ. 08192-237480 ಗೆ ಸಂಪರ್ಕಿಸಲು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ವೀರೇಶ್ ಎಸ್ ಒಡೇನಪುರ ತಿಳಿಸಿದ್ದಾರೆ.