ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಭಾವಚಿತ್ರವಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಕರಡು ಮತದಾರರ ಪಟ್ಟಿಯನ್ನು ಅಕ್ಟೋಬರ್ 27 ರಂದು ಪ್ರಕಟಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ. ತಿಳಿಸಿದ್ದಾರೆ.
ಕರಡು ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ, ಮಹಾನಗರ ಪಾಲಿಕೆ, ತಾಲ್ಲೂಕು ಕಚೇರಿ, ಮತಗಟ್ಟೆ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ. ಇದಲ್ಲದೇ 1950 ಕ್ಕೆ ಕರೆ ಮಾಡಬಹುದಾಗಿದೆ. ವಿಹೆಚ್ಎ ಆಪ್, www.nvsp.in, http;//ceo.karnataka.gov.in ವೆಬ್ಸೈಟ್ಗಳಲ್ಲಿ ಪರಿಶೀಲಿಸಬಹುದಾಗಿದೆ.
ಕರಡು ಮತದಾರರ ಪಟ್ಟಿಯಲ್ಲಿನ ದೋಷವಿದ್ದಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಲು 2023 ರ ಡಿಸೆಂಬರ್ 26 ರವರೆಗೆ ಅವಕಾಶ ಇರುತ್ತದೆ