ದಾವಣಗೆರೆ,ಅ.31 ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣಗೊಂಡು ನವೆಂಬರ್ 1 ಕ್ಕೆ 50 ವರ್ಷ ಪೂರ್ಣಗೊಳ್ಳುತ್ತಿರುವ ಹನ್ನಲೆಯಲ್ಲಿ ಸರ್ಕಾರವು ಕರ್ನಾಟಕ ಸಂಭ್ರಮ-50 ರ ಅಂಗವಾಗಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಜಿಲ್ಲಾಡಳಿತ ದಾವಣಗೆರೆ ಗಾಜಿನ ಮನೆಯಲ್ಲಿ ನವಂಬರ್ ತಿಂಗಳಲ್ಲಿ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಿದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.
ಗಾಜಿನ ಮನೆಯಲ್ಲಿ ಸಂಜೆ 6 ಗಂಟೆಯಿಂದ ಕಾರ್ಯಕ್ರಮಗಳು ನಡೆಯಲಿದ್ದು ನವಂಬರ್ 1, 4, 5, 11, 19 ಹಾಗೂ 26 ರಂದು ಸಾಂಸ್ಕøತಿಕ ಸಂಜೆ ಕಾರ್ಯಕ್ರಮಗಳು ಜರುಗಲಿವೆ. ಜಾನಪದ ಜಾದೂ, ಸಂಗೀತ, ನೃತ್ಯ ಕಾರ್ಯಕ್ರಮಗಳು ಜರುಗಲಿವೆ. ಸಾರ್ವಜನಿಕರು, ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ.

Leave a Reply

Your email address will not be published. Required fields are marked *