ರಾಜ್ಯ ವಿಧಾನ ಪರಿಷತ್ತಿನ ಆಗ್ನೇಯ ಶಿಕ್ಷಕರ ಕ್ಷೇತ್ರ ಮತ್ತು ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರವು 2024ರ ಜೂನ್ 21ಕ್ಕೆ ತೆರವಾಗಲಿದೆ. ಈ ಕ್ಷೇತ್ರಗಳ ಕರುಡು ಮತದಾರರ ಪಟ್ಟಿಯನ್ನು ನವಂಬರ್ 23 ರಂದು ಪ್ರಕಟಿಸಲಾಗಿದೆ. ಆಕ್ಷೇಪಣೆಗಳನ್ನು ಸಲ್ಲಿಸಲು ಡಿಸೆಂಬರ್ 9 ರವರೆಗೆ ಅವಕಾಶ ಕಲ್ಪಸಲಾಗಿದೆ ಎಂದು ಸಹಾಯಕ ಮತದಾರರ ನೋಂದಾಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದ್ದಾರೆ.
 ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ದಾವಣಗೆರೆ ಜಿಲ್ಲೆಯ ಹರಿಹರ, ದಾವಣಗೆರೆ, ಹಾಗೂ ಜಗಳೂರು ತಾಲ್ಲೂಕು ಸೇರಿರುತ್ತದೆ. ಕರಡು ಪಟ್ಟಿ ಅನ್ವಯ 2,140 ಗಂಡು, 1,147 ಮಹಿಳಾ ಮತದಾರರು ಸೇರಿ 3,287 ಮತದಾರರಿದಾರೆ. ಕರ್ನಾಟಕ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಜಿಲ್ಲೆಯ ನ್ಯಾಮತಿ, ಹೊನ್ನಾಳಿ, ಚನ್ನಗಿರಿ ತಾಲ್ಲೂಕು ಸೇರಿರುತ್ತದೆ. ನೈರುತ್ಯ ಪದವೀಧರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿ ಅನ್ವಯ 3,326 ಗಂಡು, 1,791 ಮಹಿಳಾ ಮತದಾರರು ಸೇರಿ ಒಟ್ಟು 5,117 ಮತದಾರರು ಮತ್ತು ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ 643 ಗಂಡು, 242 ಮಹಿಳಾ ಮತದಾರರು ಸೇರಿ ಒಟ್ಟು 885 ಮತದಾರರಿದ್ದಾರೆ.
 ಕರುಡು ಮತದಾರರ ಪಟ್ಟಿಯನ್ನು ಉಪವಿಭಾಗಾಧಿಕಾರಿಗಳ ಕಚೇರಿ ದಾವಣಗೆರೆ, ಹೊನ್ನಾಳಿ, ಮತ್ತು ಆಯಾ ತಾಲ್ಲೂಕಿನ ತಹಶೀಲ್ದಾರ್ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಕರಡು ಪಟ್ಟಿ ಪ್ರಕಟಿಸಲಾಗಿದೆ. ಮತದಾರರು ತಮ್ಮ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *