ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕು.ಕ.ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ಜಿಲ್ಲಾ ಎನ್.ಸಿ.ಸಿ. ಮತ್ತು ಎನ್.ಎಸ್.ಎಸ್, ಜಿಲ್ಲೆಯ ಎಲ್ಲಾ ಆರ್.ಆರ್.ಸಿ ಕಾಲೇಜುಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ಡಿಸೆಂಬರ್ 1 ರಂದು ಬೆಳಗ್ಗೆ 11 ಗಂಟೆಗೆ ಎ.ವಿ. ಕಮಲಮ್ಮ ಮಹಾವಿದ್ಯಾಲಯದಲ್ಲಿ ಜಿಲ್ಲಾ ಮಟ್ಟದ ವಿಶ್ವ ಏಡ್ಸ್ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ಜಾಥಾ: ಬೆಳಗ್ಗೆ 9 ಗಂಟೆಗೆ ಚಿಗಟೇರಿ ಜಿಲ್ಲಾ ಆಸ್ಪತ್ರೆ ಮುಂಭಾಗದಿಂದ ಜಾಥಾ ಕಾರ್ಯಕ್ರಮ ಆರಂಭವಾಗುತ್ತದೆ. ಅದೇ ದಿನ ಸಂಜೆ 6 ಗಂಟೆಗೆ ನಗರದ ರಾಂ & ಕೋ ವೃತ್ತದಲ್ಲಿ ಏಡ್ಸ್‍ನಿಂದ ಮರಣ ಹೊಂದಿದವರಿಗೆ ಶ್ರದ್ಧಾಂಜಲಿ ಅರ್ಪಿಸುವ ಸಲುವಾಗಿ ಕ್ಯಾಂಡಲ್ ಲೈಟ್ ಸ್ಮರಣ ಕಾರ್ಯಕ್ರಮ ಆಯೋಜಿಸಲಾಗಿದೆ.