ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾS, ಮಹಾನಗರಪಾಲಿಕೆÉ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ನವೆಂಬರ್ 30ರಂದು ಮಧ್ಯಾಹ್ನ 12 ಗಂಟೆಗೆ ನಗರದ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಬೆಳಗ್ಗೆ 10 ಗಂಟೆಗೆ ನಗರದ ದುರ್ಗಾಂಬಿಕಾ ದೇವಸ್ಥಾನದಿಂದ ಶ್ರೀ ಕನಕದಾಸರ ಕಂಚಿನ ಪುತ್ಥಳಿಯೊಂದಿಗೆ ಪಿ.ಬಿ ರಸ್ತೆಯ ಶ್ರೀ ಬೀರಲಿಂಗೇಶ್ವರ ದೇವಸ್ಥಾನದವರೆಗೆ ಮೆರವಣಿಗೆ ಸಾಗಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ನೆರವೇರಿಸುವರು. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪ  ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ದಾವಣಗೆರೆ ಲೋಕಸಭಾ ಸಂಸದರಾದ ಡಾ. ಜಿ.ಎಂ ಸಿದ್ದೇಶ್ವರ, ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಎಸ್ ಬಸವಂತಪ್ಪ, ಚನ್ನಗಿರಿ ಶಾಸಕರಾದ ಬಸವರಾಜ ವಿ ಶಿವಗಂಗಾ, ಜಗಳೂರು ಶಾಸಕರಾದ ಬಿ ದೇವೇಂದ್ರಪ್ಪ, ಹರಿಹರ ಶಾಸಕರಾದ ಬಿ.ಪಿ ಹರೀಶ್, ಹೊನ್ನಾಳಿ ಶಾಸಕರಾದ ಶಾಂತನಗೌಡ ಡಿ.ಜಿ, ವಿಧಾನ ಪರಿಷತ್ ಶಾಸಕರಾದ ಕೆ.ಪಿ ನಂಜುಂಡಿ ವಿಶ್ವಕರ್ಮ, ರವಿಕುಮಾರ್ ಎನ್, ಡಾ. ತೇಜಸ್ವಿನಿ ಗೌಡ, ಎಸ್.ಎಲ್ ಭೋಜೇಗೌಡ, ವೈ ಎ ನಾರಾಯಣಸ್ವಾಮಿ, ಚಿದಾನಂದ ಎಂ ಗೌಡ, ಡಿ.ಎಸ್ ಅರುಣ್, ಕೆ.ಎಸ್ ನವೀನ್, ಕೆ ಅಬ್ದುಲ್ ಜಬ್ಬಾರ್, ದಾವಣಗೆರೆ ಮಹಾನಗರ ಪಾಲಿಕೆಯ ಮಹಾಪೌರರಾದ ವಿನಾಯಕ ಬಿ.ಹೆಚ್, ಪಾಲಿಕೆ ವಿಪಕ್ಷ ನಾಯಕ ಪ್ರಸನ್ನಕುಮಾರ್ ಕೆ, ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಸುರೇಶ್ ಬಿ ಇಟ್ನಾಳ್, ಜಿಲ್ಲಾ ಪೆÇಲೀಸ್ ಅಧೀಕ್ಷರಾದ ಉಮಾ ಪ್ರಶಾಂತ್ ಭಾಗವಹಿಸುವರು.
ಹಗರಿಬೊಮ್ಮನಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ವೆಂಕಟೇಶ್.ಕೆ ಇವರು ಉಪನ್ಯಾಸ ನೀಡುವರು.

Leave a Reply

Your email address will not be published. Required fields are marked *