ಶಿಕಾರಿಪುರದ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ವತಿಯಿಂದ ಕ್ವಿಂಟಲ್ ಗೆ 2250 ರಂತೆ ನೇರವಾಗಿ ರೈತರಿಂದ ಮೆಕ್ಕೆಜೋಳವನ್ನು ಖರೀದಿಸಲಾಗುತ್ತದೆ ಎಂದು ಶಿಕಾರಿಪುರ ಪಶು ಆಹಾರ ಘಟಕ ವ್ಯವಸ್ಥಾಪಕರು ತಿಳಿಸಿದ್ದಾರೆ.
ಮೆಕ್ಕೆಜೋಳ ಬೆಳೆದಿರುವ ಆಸಕ್ತ ರೈತರು ಸಮೀಪದ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಒಂದು ಕೆ.ಜಿ ಪ್ರಮಾಣದಷ್ಟು ಮೆಕ್ಕೆಜೋಳ ಮಾದರಿಯನ್ನು ನೀಡಿ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಆಗಿರುವ ಸಂಖ್ಯೆಯೊಂದಿಗೆ ನೊಂದಾಯಿಸಿಕೊಳ್ಳಬಹುದು. ಪ್ರತಿ ಒಬ್ಬ ರೈತರಿಂದ ಗರಿಷ್ಠ 1000 ಕ್ವಿಂಟಾಲ್ ಮೆಕ್ಕೆಜೋಳ ಸರಬರಾಜಿಗೆ ಸೀಮಿತಗೊಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಡಾ.ಎಸ್.ಎಂ.ಮೂರ್ತಿ, ವ್ಯವಸ್ಥಾಪಕರು (ಶೇಮತಾಂ) ಮೊ.ಸಂ 7760980540 ಗೆ ಸಂಪರ್ಕಿಸಲು ತಿಳಿಸಿದ್ದಾರೆ.