ನ್ಯಾಮತಿ: ತಾಲೂಕು ಬಸವನಹಳ್ಳಿ ಗ್ರಾಮದಲ್ಲಿ ಭಾನುವಾರ 2023 -24ನೇ ಸಾಲಿನ ಶಾಲಾ ಸಾಂಸ್ಕøತಿಕ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್ ಬಿ ಮಂಜಪ್ಪ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಮಕ್ಕಳ ಶಾಲಾ ವಾರ್ಷಿಕೋತ್ಸವದಲ್ಲಿ ಮಾತನಾಡಿದ ಅವರು ಪೆÇೀಷಕರು ತಮ್ಮ ಮಕ್ಕಳನ್ನು ಕೃಷಿ ಚಟುವಟಿಕೆಗೆ ಬಳಸಿಕೊಳ್ಳದೆ ಮಕ್ಕಳಿಗೆ ಸರಿಯಾದ ರೀತಿಯ ಶಿಕ್ಷಣವನ್ನು ಕೊಡಿಸಿ ಮನೆಯಲ್ಲಿ ಮಕ್ಕಳು ಸರಿಯಾದ ರೀತಿಯಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಾರೋ ಇಲ್ಲವೂ ಅನ್ನುವುದು ಗಮನಹರಿಸಬೇಕು. ಮಕ್ಕಳಿಗೆ ಆಸ್ತಿ ಮಾಡದೆ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಬೇಕು ಎಂದರು. ಎಸ್ ಡಿ ಎಂ ಸಿ ಅಧ್ಯಕ್ಷ ಬಿಎಸ್ ಚಂದ್ರಪ್ಪ, ಅಖಂಡ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಿ ಎಚ್ ಉಮೇಶ್, ಚಂದ್ರಪ್ಪ ಡ್ಯಾನ್ಸ್ ಮಾಸ್ಟರ್, ಗ್ರಾಮ ಪಂಚಾಯಿತಿ ಸದಸ್ಯರಾದ ಹರೀಶ್, ಬೀರಲಿಂಗೇಶ್ವರ ದೇವಸ್ಥಾನ ಟ್ರಸ್ಟಿನ ಅಧ್ಯಕ್ಷರು ಉಪಾಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಖಜಾಂಚಿ ಹಾಗೂ ನಿರ್ದೇಶಕರು ಸೇರಿದಂತೆ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು ಸೇರಿದಂತೆ ಬಸವನಹಳ್ಳಿ ಗ್ರಾಮಸ್ಥರು ಮತ್ತು ಪುಟಾಣಿ ಮಕ್ಕಳು ಉಪಸ್ಥಿತಿಯಲ್ಲಿದ್ದರು.