ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ ಸಂಸ್ಥೆಗಳಿಂದ ಜನವರಿ ಮಾಹೆಯಲ್ಲಿ ಪ್ರಾರಂಭವಾಗಲಿರುವ 6 ತಿಂಗಳ ಅವಧಿಯ ದೂರಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗಾಗಿ ಸಹಕಾರ ಸಂಘ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ತರಬೇತಿ ಹೊಂದದ ಸಿಬ್ಬಂದಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯದ ಬೆಂಗಳೂರು, ಮೈಸೂರು, ಮಡಿಕೇರಿ, ಮೂಡಬಿದ್ರೆ, ಶಿವಮೊಗ್ಗ, ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಸ್ಥಳಗಳಲ್ಲಿ ತರಬೇತಿ ನೀಡಲಾಗುವುದು. ತರಬೇತಿಯನ್ನು ಪಡೆಯಲಿಚ್ಚಿಸುವ ಅಭ್ಯರ್ಥಿಗಳು ಸಹಕಾರ ಸಂಘ, ಸಹಕಾರ ಇಲಾಖೆ ಅಥವಾ ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ವೇತನ ಪಡೆಯುವ ನೌಕರರಾಗಿರಬೇಕು. ಖಾಸಗಿ ಅಭ್ಯರ್ಥಿಗಳಿಗೆ ನಿಯಮಿತವಾಗಿ ಅವಕಾಶವನ್ನು ಕಲ್ಪಿಸಲಾಗಿದೆ. ವಯೋಮಿತಿ 16 ವರ್ಷ ಮೇಲ್ಪಟ್ಟವರು ಅರ್ಜಿ ಸಲ್ಲಿಸಬಹುದು. ತರಬೇತಿಯಲ್ಲಿ ಸಂಘ, ಸಂಸ್ಥೆಯಿಂದ ಬರುವ ಅಭ್ಯರ್ಥಿಗಳಿಗೆ ಮಾಹೆಯಾನ ರೂ. 400 ಗಳ ಶಿಷ್ಯವೇತನವನ್ನು ನೀಡಲಾಗುವುದು. ಅರ್ಜಿ ಸಲ್ಲಿಸಲು ಡಿ. 31 ಕೊನೆಯ ದಿನವಾಗಿರುತ್ತದೆ.
ಆಸಕ್ತರು ಡಿ. 31 ರೊಳಗಾಗಿ ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತ., #2532, ಕಲಾಪ್ರಕಾಶ ವೃಂದ, 1ನೇ ಮಹಡಿ, ವಿನೋಬನಗರ 2ನೇ ಮುಖ್ಯರಸ್ತೆ, ಎಂ.ಸಿ.ಸಿ ‘ಎ’ ಬ್ಲಾಕ್, ದಾವಣಗೆರೆ (ದೂ.ಸಂ. 08192-237672) ಈ ಸಂಸ್ಥೆಯಿಂದ ಶುಲ್ಕ ರೂ. 100 ಗಳನ್ನು ನಗದು ಅಥವಾ ಅಂಚೆ ಮೂಲಕ ರೂ. 125 ಗಳ ಡಿ.ಡಿ. ಪಾವತಿಸಿ ತರಬೇತಿಯ ಅರ್ಜಿ ಫಾರಂ ಮತ್ತು ವಿವರಣಾ ಪುಸ್ತಕವನ್ನು ಪಡೆದು ಭರ್ತಿ ಮಾಡಿ ಆಯಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಸಹಕಾರ ಒಕ್ಕೂಟ ನಿಗಮದ ಮುಖ್ಯಕಾರ್ಯನಿರ್ವಹಣಾಧಿಕಾರಿ ಮಂಗಳಗೌಡ ದಾನಪ್ಪಗೌಡ್ರ ತಿಳಿಸಿದ್ದಾರೆ.