ಕೈಗಾರಿಕಾ ತರಬೇತಿ ಮತ್ತು ಇಲಾಖೆ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ದಾವಣಗೆರೆ ಇವರ ವತಿಯಿಂದ ಡಿ. 22 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಹದಡಿ ರಸ್ತೆಯಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಆವರಣದಲ್ಲಿ ವಿದ್ಯಾರ್ಥಿ ಸಂಘದ ಹಾಗೂ ಉಪಹಾರ ಗೃಹದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿದೆ.
ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸುವರು. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಉಪನಿರ್ದೇಶಕರು ಹಾಗೂ ಪ್ರಾಚಾರ್ಯರಾದ ಏಕನಾಥ. ಎನ್ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಮಹಾನಗರ ಪಾಲಿಕೆ ಮಹಾಪೌರರಾದ ವಿನಾಯಕ ಬಿ.ಹೆಚ್, ಉಪಮಹಾಪೌರರಾದ ಯಶೋಧ ಯಗ್ಗಪ್ಪ, ಪಾಲಿಕೆ ಸದಸ್ಯೆ ಶ್ರೀಮತಿ ನಾಗರತ್ನಮ್ಮ ಭಾಗವಹಿಸುವರು