ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ನಗರದ ಪಿ.ಬಿ.ರಸ್ತೆಯ ಅರುಣ ಚಿತ್ರಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಡಿ. 27, 28 ರಂದು ಕುರಿ ಮತ್ತು ಮೇಕೆ ಸಾಗಾಣಿಕೆ ತರಬೇತಿ ಮತ್ತು ಡಿ. 29, 30 ರಂದು ಆಧುನಿಕ ಹೈನುಗಾರಿಕೆ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.
ತರಬೇತಿಯಲ್ಲಿ ಭಾಗವಹಿಸುವ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್‍ಪೋರ್ಟ್ ಸೈಜ್ ಫೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರ ಜೆರಾಕ್ಸ್‍ನೊಂದಿಗೆ ತರಬೇತಿಗೆ ಹಾಜರಾಗಬೇಕು.
ತರಬೇತಿಯಲ್ಲಿ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು  ಪಶುವೈದ್ಯಕೀಯ  ತರಬೇತಿ ಕೇಂದ್ರ ದಾವಣಗೆರೆ ದೂ. ಸಂ 08192-233787ಗೆ ಸಂಪರ್ಕಿಸಲು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಪಶು ವೈದ್ಯಾಧಿಕಾರಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *