ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಎಲ್ಲಾ ತಾಂತ್ರಿಕ ಮತ್ತು ಬ್ಯಾಂಕ್ ಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಡಿ. 27 ರಿಂದ 29 ರವರೆಗೆ ಕ್ಯ್ಯಾಂಪ್‍ಗಳನ್ನು ಆಯೋಜಿಸಲಾಗಿದೆ.
ಕ್ಯಾಂಪ್‍ಗಳಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ, ಹೊಸ ಬ್ಯಾಂಕ್ ಖಾತೆಗಳನ್ನು ತೆರೆಯುವುದು ಮತ್ತು ಆಧಾರ್ ಜೋಡಣೆ,. ಇ-ಕೆವೈಸಿ ನವೀಕರಣ, ಗೃಹಲಕ್ಷ್ಮಿ ಅರ್ಜಿಯ ಸ್ಥಿತಿ ಪರಿಶೀಲನೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಇತರ ಸಮಸ್ಯೆಗಳನ್ನು ಪರಿಹಾರ ಒದಗಿಸಲಾಗುತ್ತದೆ.
ಫಲಾನುಭವಿಗಳು ನಿಗಧಿತ ದಿನಗಳಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಸೌಲಭ್ಯ ಪಡೆದುಕೊಳ್ಳಬಹುದು. ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್ ತಿಳಿಸಿದ್ದಾರೆ.