ಅಮರಶಿಲ್ಪಿ ಜಕಣಾಚಾರಿ ಅವರು ಶಿಲ್ಪ ಕಲೆಗೆ ಅಪಾರ ಕೊಡುಗೆÉ ನೀಡಿದ್ದು, ಇವರ ಹೆಸರು ಸರ್ವಕಾಲಕ್ಕೂ ಅಮರವಾಗಿರುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ತುಂಗಾಭದ್ರ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಮರ ಶಿಲ್ಪಿ ಜಕಣಾಚಾರಿ ಅವರ ಸಂಸ್ಮರಣಾ ದಿನಾಚರಣೆಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಕನ್ನಡ ನಾಡಿನ ಇತಿಹಾಸದಲ್ಲಿ ಹೊಯ್ಸಳರು ತಮ್ಮದೇ ಆದ ಕೊಡುಗೆಯನ್ನು ಶಿಲ್ಪ ಕಲೆಗೆ ನೀಡಿದ್ದಾರೆ. ಇವರಲ್ಲಿ ವಿಷ್ಣುವರ್ಧನ ಅರಸನಕಾಲದಲ್ಲಿ ಶಿಲ್ಪಕಲೆಯು ಉತ್ತುಂಗ ಶಿಖರದಲ್ಲಿತ್ತು. ವಿಷ್ಣುವರ್ಧನನ ಹೆಂಡತಿ ಶಾಂತಲೆ ನಾಟ್ಯ ರಾಣಿ ಎಂದು ಪ್ರಸಿದ್ಧಿಯಾಗಿದ್ದಳು. ಈ ಕಾಲದಲ್ಲಿದ್ದ ಅಮರಶಿಲ್ಪಿ ಜಕಣಾಚಾರಿ ಬೇಲೂರು ಹಳೆಬೀಡಿನ ಚನ್ನಕೇಶವ ದೇವಾಲಯದಲ್ಲಿ ಶಿಲ್ಪಗಳನ್ನು ಕೆತ್ತನೆ ಮಾಡಿ ಹೆಸರಾಗಿದ್ದಾರೆ ಎಂದರು.
ಅಮರ ಶಿಲ್ಪಿ ಜಕಣಾಚಾರಿ ಅವರು ರೂಪಿಸಿದ ಅದ್ಭುತ ಕಲಾಕೃತಿಗಳು ಇಂದಿಗೂ ನಮ್ಮನ್ನು ಬೆರಗುಗೊಳಿಸಿತ್ತವೆ. ಇಂತಹ ಕಲೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು. ಜಗತ್ತಿನ ಅದ್ಭುತ ಶಿಲ್ಪಿಗಳ ಸಾಲಿನಲ್ಲಿ ನಿಲ್ಲುವ ಜಕಣಾಚಾರಿ ಅವರು ಬೇಲೂರು ಮತ್ತು ಹಳೆಬೀಡು ಸೇರಿದಂತೆ ಇತರ ಸ್ಥಳಗಳಲ್ಲಿ ಕಲ್ಲಿನಲ್ಲಿ ಕೆತ್ತಿದ ಕಲಾಕೃತಿಗಳನ್ನು ನೋಡುವುದೇ ಒಂದು ಸೌಭಾಗ್ಯ. ಮಾಡುವ ಕೆಲಸದಲ್ಲಿ ಜ್ಞಾನ, ಶ್ರದ್ಧೆ, ನಿμÉ್ಠ ಮತ್ತು ಪ್ರಾಮಾಣಿಕತೆ ಇದ್ದಲ್ಲಿ ಯಶಸ್ಸು ಲಭಿಸುತ್ತದೆ. ನಮ್ಮೊಳಗಿನ ಕಲೆಯನ್ನು ನಾವು ಗುರುತಿಸಿದರೆ ಮಾತ್ರ ಸಮಾಜ ನಮ್ಮನ್ನು ಗುರುತಿಸುತ್ತದೆ. ಸಾಧಕರನ್ನು ಸ್ಮರಣೆ ಮಾಡಿದರμÉ್ಟೀ ಸಾಲದು. ಅವರ ಗುಣ ಮತು ್ತಬೆಳೆದು ಬಂದ ಪರಿಶ್ರಮದ ಘಟನೆಗಳನ್ನು ತಿಳಿದು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅತೀ ಮುಖ್ಯ ಎಂದರು.
ಪ್ರೊ. ನಾಗರಾಜ್, ದಾವಣಗೆರೆ ಜಕಣಾಚಾರಿ ಜೀವನ ಚರಿತ್ರೆ ಮತ್ತು ಸಾಧನೆಗಳ ಕುರಿತು ಉಪನ್ಯಾಸ ನೀಡಿದರು.
ಮಹಾನಗರಪಾಲಿಕೆ ಉಪಮಹಾಪೌರರದ ಯಶೋಧ ಹೆಗ್ಗಪ್ಪ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೃಷ್ಣ ನಾಯ್ಕ್, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ರಾಜೇಂದ್ರ ಪ್ರಸಾದ್ ಹಾಗೂ ವಿಶ್ವಕರ್ಮ ಸಮಾಜದ ಮುಖಂಡರು ಉಪಸ್ಥಿತರಿದ್ದರು.