ನ್ಯಾಮತಿ: ತಾಲೂಕು ಪಲವನಹಳ್ಳಿ ಗ್ರಾಮದಲ್ಲಿರುವ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ಗ್ರಾಮೀಣ ಆಂಗ್ಲ ಮಾಧ್ಯಮ ಶಾಲೆಯವತಿಯಿಂದ 2023-24ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಹಮ್ಮಿಕೊಂಡಿದ್ದರು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಕ್ಷೇತ್ರ ಶಿಕ್ಷಣಾಧಿಕಾರಿ ನಂಜರಾಜ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಪಲವನಹಳ್ಳಿ ಗ್ರಾಮದಲ್ಲಿ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯನ್ನು ತೆರೆದು ಹಳ್ಳಿ ಭಾಗದ ಬಡ ವಿದ್ಯಾರ್ಥಿಗಳಿಗೆ ಕಡಿಮೆ ವೆಚ್ಚದಲ್ಲಿ ಶಿಕ್ಷಣ ನೀಡುತ್ತಿದ್ದಾರೆ. ಅದರಲ್ಲೂ ಈ ಶಾಲೆಯಲ್ಲಿ ಉನ್ನತ ಪದವಿಯನ್ನು ಪಡೆದಂತಹ ನುರಿತ ಶಿಕ್ಷಕರನ್ನು ನೇಮಕ ಮಾಡಿಕೊಂಡು ಆಂಗ್ಲ ಭಾಷೆಯಲ್ಲಿ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ. ಸರ್ಕಾರದ ವತಿಯಿಂದ ಹಳ್ಳಿಯಲ್ಲಿಯೂ ಸಹ ನಮ್ಮ ಸರ್ಕಾರಿ ಶಾಲೆಯಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ಮಕ್ಕಳಿಗೆ ಇಂಗ್ಲಿಷ ಮೀಡಿಯಂನಲ್ಲಿ ಉಚಿತವಾಗಿ ಶಿಕ್ಷಣ ಸರ್ಕಾರ ಸಹ ನೀಡುತ್ತಿದೆ. ಗ್ರಾಮೀಣ ಭಾಗದಲ್ಲಿರುವ ಪೆÇೀಷಕರು ಸದುಪಯೋಗ ಪಡಿಸಿಕೊಂಡು ನಿಮ್ಮ ಮಕ್ಕಳಿಗೆ ಇಂಗ್ಲಿಷ್ ಮೀಡಿಯಂನಲ್ಲಿ ಶಿಕ್ಷಣವನ್ನ ಪಡೆದುಕೊಳ್ಳಬಹುದು ಎಂದು ಪೆÇೀಷಕರಿಗೆ ತಿಳಿಸಿದರು.
ಅಧ್ಯಕ್ಷತೆಯನ್ನು ಶರಣಪ್ಪ ಬಿ, ವಹಿಸಿಕೊಂಡಿದ್ದರು.
ತ್ರಿವೇಣಿ ಮತ್ತು ದೀಪಾ ನಿರೂಪಣೆಯನ್ನು ನಡೆಸಿಕೊಟ್ಟರು.
ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.
ಶಾಲೆಯ ಸದಸ್ಯರುಗಳಾದ ಸೋಮಣ್ಣ ಎಸ್, ಬೆಂಗಳೂರು ವೃಕ್ಸಾ ಸದಸ್ಯರಾದ ಜಯ ರಂಗನಾಥ್, ಕಾರವಾರ ಎಜುಕೇರ್ ಸ್ಕೂಲಿನ ಪ್ರಾಂಶುಪಾಲೆ ನಾಗರತ್ನಮ್ಮ , ಕಾರ್ಯದರ್ಶಿ ಅರವಿಂದ್, ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಸಹ ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಸಹ ಉಪಸ್ಥಿತಿಯಲ್ಲಿದ್ದರು.