ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ(ರಿ), ನೆರಳು ಬೀಡಿ ಕಾರ್ಮಿಕರ ಯೂನಿಯನ್, ದಲಿತ ಮುಸ್ಲಿಂ ಮಹಿಳಾ ಒಕ್ಕೂಟ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಜ.9 ರಂದು ಬೆಳಿಗ್ಗೆ 11.30 ಕ್ಕೆ ನಗರದ ದೇವರಾಜ್ ಅರಸ್ ಬಡಾವಣೆಯ ನೆರಳು ಬೀಡಿ ಕಾರ್ಮಿಕರ ಯೂನಿಯನ್ ಸಭಾಂಗಣದಲ್ಲಿ ಭಾರತದ ಮೊದಲ ಶಿಕ್ಷಕಿಯರಾದ ಫಾತಿಮಾ ಶೇಖ್ ಸಾವಿತ್ರಿಬಾಯಿ ಪುಲೆ ಜನ್ಮದಿನದ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ಉದ್ಘಾಟಿಸುವರು. ನೆರಳು ಬೀಡಿ ಕಾರ್ಮಿಕರ ಯೂನಿಯನ್ ಅಧ್ಯಕ್ಷರಾದ ಜಬೀನಾ ಖಾನಂ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಅರುಣಕುಮಾರ್.ಎಲ್.ಹೆಚ್, ಅಜಾದ್ ನಗರದ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‍ಪೆಕ್ಟರ್ ಇಮ್ರಾನ್ ಬೇಗ್, ನೆರಳು ಬೀಡಿ ಕಾರ್ಮಿಕರ ಯುನಿಯನ್ ಕಾರ್ಯಕಾರಿ ಸಮಿತಿ ಸದಸ್ಯರಾದ ಸಬ್ರೀನ್ ತಾಜ್, ದಲಿತ ಮುಸ್ಲಿಂ ಮಹಿಳಾ ಒಕ್ಕೂಟ ಕಾರ್ಯಕಾರಿ ಸಮಿತಿಯ ಸದಸ್ಯರಾದ ಆಯಿಷಾ ಖಾನಂ ಭಾಗವಹಿಸುವರು. ನೆರಳು ಬೀಡಿ ಕಾರ್ಮಿಕರ ಯೂನಿಯನ್ ಕಾರ್ಯದರ್ಶಿ ಎಂ.ಕರಿಬಸಪ್ಪ ಪ್ರಾಸ್ತವಿಕವಾಗಿ ಮಾತನಾಡುವರು.