ದೇಶದಲ್ಲಿ ಸಂವಿಧಾನವನ್ನು ಜಾರಿ ಮಾಡಿ ಇದೇ ಜನವರಿ 26 ರಂದು 75 ನೇ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು ಈ ಅಮೃತ ದಿನಾಚರಣೆಯನ್ನು ಅರ್ಥಪೂರ್ಣ ಹಾಗೂ ಸಾರ್ಥಕವಾಗಿ ಆಚರಣೆ ಮಾಡಲು ಎಲ್ಲಾ ಸಿದ್ದತೆ ಕೈಗೊಳ್ಳುವಂತೆ ವಿವಿಧ ಸಮಿತಿಗಳ ಅಧಿಕಾರಿಗಳಿಗೆ  ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎಂ.ವಿ. ಅವರು ಸೂಚನೆ ನೀಡಿದರು.
   ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣಾ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಹಬ್ಬ ಗಣರಾಜ್ಯೋತ್ಸವ ಅರ್ಥಪೂರ್ಣವಾಗಿರಲಿ, ದೇಶದ ಗಣರಾಜ್ಯಕ್ಕಾಗಿ ಶ್ರಮಿಸಿದ ಎಲ್ಲಾ ಮಹನೀಯರನ್ನು ನೆನೆಯುವ ದಿನ ಇದಾಗಿದ್ದು, ಅವರ ಶ್ರಮ ತ್ಯಾಗ, ಬಲಿದಾನಗಳಿಗೆ ನಾವು ಅರ್ಥಪೂರ್ಣವಾಗಿ ಗೌರವ ಸಮರ್ಪಿಸೋಣ ಎಂದರು.
   ಜ.26 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಲಿದೆ. ಎಲ್ಲಾ ಇಲಾಖಾ ಮುಖ್ಯಸ್ಥರು ತಮ್ಮ ಕಚೇರಿಗಳಲ್ಲಿ ರಾಷ್ಟ್ರಧ್ವಜಾರೋಹಣ ನೆರೆವೇರಿಸಿ ಬೆಳಿಗ್ಗೆ 9 ಗಂಟೆಯೊಳಗಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಜರಿರಬೇಕು. ಅಂದು ಸರ್ಕಾರಿ ರಜೆ ಎಂದು ಭಾವಿಸಿ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಗೈರಾಗದೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು.
 ಕ್ರೀಡಾಂಗಣದಲ್ಲಿ ಹತ್ತು ಸಾವಿರಕ್ಕಿಂತಲೂ ಹೆಚ್ಚು ಜನರು ಭಾಗವಹಿಸಬೇಕು.  ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಶಿಕ್ಷಣ ಇಲಾಖೆ ನೋಡಿಕೊಳ್ಳಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವ ಮಕ್ಕಳಿಗೆ ಶುದ್ದ ಕುಡಿಯುವ ನೀರಿನ ವ್ಯವಸ್ಥೆ, ಸಾಂಸ್ಕøತಿಕ ಕಾರ್ಯಕ್ರಮ ನೀಡುವ ಮತ್ತು ಪೆರೇಡ್‍ನಲ್ಲಿ ಭಾಗವಹಿಸುವ ಮಕ್ಕಳಿಗೆ ಅಗತ್ಯ ಸೌಲಭ್ಯಗಳನ್ನು ಸಂಬಂಧಿಸಿದ ಇಲಾಖೆಗಳು ಒದಗಿಸಬೇಕು ಎಂದು ಸೂಚಿಸಿದರು.
 ಪ್ಲಾಸ್ಟಿಕ್ ಧ್ವಜ ಮತ್ತು ಪ್ಲಾಸ್ಟಿಕ್ ಹೂಗುಚ್ಚಗಳನ್ನು ಮತ್ತು ಪ್ಲಾಸ್ಟಿಕ್ ನೀರಿನ ಬಾಟಲ್‍ಗಳನ್ನು ಯಾವುದೇ ಕಾರಣಕ್ಕೂ ತರುವಂತಿಲ್ಲ. ಇಡೀ ಕಾರ್ಯಕ್ರಮದ ಮೇಲುಸ್ತುವಾರಿಯನ್ನು ಅಪರ ಜಿಲ್ಲಾಧಿಕಾರಿ, ಉಪ ವಿಭಾಗಧಿಕಾರಿ, ತಹಶೀಲ್ದಾರರು, ಪೊಲೀಸ್ ಉಪಾಧೀಕ್ಷಕರು, ಮಹಾನಗರಪಾಲಿಕೆ ಆಯುಕ್ತರು ಇವರುಗಳು ನೋಡಿಕೊಂಡು ಕಾರ್ಯಕ್ರಮ ಅರ್ಥಪೂರ್ಣಗೊಳಿಸಲು ಸಹಕರಿಸಬೇಕು ಎಂದರು.
 ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿ ರಾಷ್ಟ್ರಧ್ವಜ ಸಂಹಿತಿಯನ್ನು ಕಾಪಾಡಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆಯವರು ಎಲ್ಲಾ ಶಾಲೆಗಳಲ್ಲಿ ಬೆಳಗ್ಗೆ 7.30 ಕ್ಕೆ ರಾಷ್ಟ್ರಧ್ವಜಾರೋಹಣ ನೆರವೇರಿಸಬೇಕು ಎಂದರು.
ದೀಪಾಲಂಕಾರ: ಎಲ್ಲಾ ಸರ್ಕಾರಿ ಕಚೇರಿ ಕಟ್ಟಡಗಳಿಗೆ, ನಗರದ ಪ್ರಮುಖ ವೃತ್ತಗಳಿಗೆ ಸಂಬಂಧಪಟ್ಟ ಇಲಾಖೆಗಳು ದೀಪಾಲಂಕಾರ ಮಾಡಿಸಬೇಕು. ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿ ಧ್ವಜ ಸಂಹಿತೆ ಕಾಪಾಡಬೇಕು ಎಂದರು.       ಮಹಾನಗರಪಾಲಿಕೆಯಿಂದ ವೇದಿಕೆ ನಿರ್ಮಾಣ, ಆಸನದ ವ್ಯವಸ್ಥೆ, ಶಾಮಿಯಾನ, ಧ್ವನಿ ವರ್ಧಕ, ಕಾರ್ಪೆಟ್ ವ್ಯವಸ್ಥೆ ಮಾಡಬೇಕು. ತೋಟಗಾರಿಕೆ ಇಲಾಖೆಯವರು ವೇದಿಕೆ ಮುಂಭಾಗ ಹೂ ಅಲಂಕಾರ ಮತ್ತು ಹೂವಿನ ಕುಂಡಗಳನ್ನು ಇರಿಸಬೇಕು.  ಅಲ್ಲದೆ ಎಲ್ಲ ಇಲಾಖೆಗಳ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಶಿಸ್ತಿನಿಂದ ನಿರ್ವಹಿಸುವ ಮೂಲಕ ಗಣರಾಜ್ಯೋತ್ಸವವನ್ನು ಯಶಸ್ವಿಗೊಳಿಸಬೇಕೆಂದರು ಎಂದರು.
 ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಜಯಕುಮಾರ್ ಎಂ ಸಂತೋಷ್ ಕುಮಾರ್ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *