ನ್ಯಾಮತಿ: ತಾಲೂಕ ಕಚೇರಿ ಸಭಾಂಗಣದಲ್ಲಿ ತಾಲೂಕು ಉಸ್ತುವಾರಿಯಾಗಿ ಸರೋಜಾ ಬಿ ಬಿ ಶ್ರೇಣಿಯ ಕುಲ ಸಚಿವರು ವಿಶ್ವವಿದ್ಯಾನಿಲಯ ದಾವಣಗೆರೆ ಇವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿ ಆದೇಶದ ಹಿನ್ನೆಲೆಯಲ್ಲಿ ಅವರ ಘನ ಅಧ್ಯಕ್ಷತೆಯಲ್ಲಿ ಪ್ರಥಮವಾಗಿ ತಾಲೂಕು ಮಟ್ಟದ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಪ್ರಗತಿ ಪರಿಶೀಲನೆ ಸಭೆಯನ್ನು ಉದ್ದೇಶಿಸಿ ಸರೋಜ ಬಿ ಬಿ ,ಯವರು ಮಾತನಾಡಿದ ಅವರು ನ್ಯಾಮತಿ ತಾಲೂಕಿನಲ್ಲಿ ಭೌತಿಕ ಅಭಿವೃದ್ಧಿ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ಗೊಳಿಸುವ ನಿಟ್ಟಿನಲ್ಲಿ ಪ್ರಗತಿ ಪರಿಶೀಲನಾ ಸಭೆಯನ್ನು ಇಂದು ನಡೆಸಬೇಕಾಯಿತು.ತಾಲೂಕ ಮಟ್ಟದ ಅಧಿಕಾರಿಗಳು ಸರ್ಕಾರದಿಂದ ಬಂದಂತ ಯೋಜನೆ ಮತ್ತು ಕಾಮಗಾರಿಗಳನ್ನು ನಿರ್ಲಕ್ಷ್ಯ ವಹಿಸದೆ ಸಾರ್ವಜನಿಕರಿಗೆ ಯಾವುದೇ ರೀತಿ ತೊಂದರೆಯಾಗದಂತೆ ತೀವ್ರಗತಿಯಲ್ಲಿ ಅನುಷ್ಠಾನ ಮಾಡಬೇಕು ಎಂದು ಆದೇಶಿಸಿದರು. ಈ ಸಂದರ್ಭದಲ್ಲಿ ತಹಸಿಲ್ದಾರ್ ಎಚ್ ಬಿ ಗೋವಿಂದಪ್ಪ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಗಣೇಶ್ ರಾವ್, ಇಇಒ ರಾಘವೇಂದ್ರ ಎಸ್ ವಿ, ಪೆÇಲೀಸ್ ಇನ್ಸ್ಪೆಕ್ಟರ್ ರವಿ ಎನ್ ಇ, ತಾಲೂಕು ಮಟ್ಟದ ಅಧಿಕಾರಿ ವರ್ಗದವರು ಸಹ ಉಪಸ್ಥಿತಿಯಲ್ಲಿದ್ದರು.