ಚರಿತ್ರೆಯಿಂದ ವರ್ತಮಾನದವರೆಗೆ ಮನುಷ್ಯ ಎμÉ್ಟೀ ವಿಕಾಸ ಹಾಗೂ ಏನೆಲ್ಲಾ ಸಾಧಿಸಿದರೂ ಇಂದಿಗೂ ಕೃತಕ ರಕ್ತವನ್ನು ಮಾತ್ರ ಉತ್ಪಾದಿಸಲು ಸಾಧ್ಯ ವಾಗಿಲ್ಲ. ಹಾಗಾಗಿ ಒಬ್ಬ ಮನುಷ್ಯ, ಮತ್ತೊಬ್ಬನಿಗೆ ನೀಡಬಹುದಾದ ಅಮೂಲ್ಯ ಕೊಡುಗೆಗಳಲ್ಲಿ ರಕ್ತದಾನ, ಇದು ಮಾನವಕುಲಕ್ಕೆ ಅತ್ಯಂತ ಮಹತ್ವದ ಸೇವೆಯೆಂದು ಪರಿಗಣಿತವಾಗಿದೆ ಎಂದು  ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ ತಿಳಿಸಿದರು.
  ಅವರು ಬುಧವಾರ ದಾವಣಗೆರೆ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದಲ್ಲಿ ಜಿಲ್ಲಾ ರಕ್ತನಿಧಿ ಭಂಡಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರುಗಳ ಸಹಭಾಗಿತ್ವದಲ್ಲಿ ಆಯೋಜಿಸಲಾದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರೆಣ್ಣವರ್ ಮಾತನಾಡಿ ರಕ್ತದಾನ ಬಹಳ ಪುಣ್ಯದ ಕೆಲಸ ಅμÉ್ಟೀ ಅಲ್ಲ, ನಮ್ಮ ಆರೋಗ್ಯ ಮತ್ತು ಸಮುದಾಯದ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಇದು ಅತ್ಯಂತ ಮಹತ್ವಪೂರ್ಣವಾದದು ಎಂದ ಅವರು ಜಿಲ್ಲಾ ವಕೀಲರ ಸಂಘದ ಈ ಕಾರ್ಯ ಶ್ಲಾಘನೀಯವಾದುದು ಎಂದರು.
ಚಿಗಟೇರಿ ಜನರಲ್ ಆಸ್ಪತ್ರೆಯ ವೈದ್ಯರಾದ ಡಾ.ಗೀತಾ ಮಾತನಾಡಿ, ಇತ್ತೀಚೆಗೆ ಸಾರ್ವಜನಿಕ ಆಸ್ಪತ್ರೆಗಳಲ್ಲಿ ರಕ್ತದ ಅಭಾವ ಕಂಡುಬರುತ್ತಿದೆ. ಆಸ್ಪತ್ರೆಗೆ ಸುಮಾರು ನಾಲ್ಕು ಜಿಲ್ಲೆಗಳ ರೋಗಿಗಳು ದಾಖಲಾಗುತ್ತಿದ್ದಾರೆ. ಇದರಿಂದ ನಿಗದಿತ ಪ್ರಮಾಣದ ರಕ್ತದ ಲಭ್ಯತೆಯ ಕೊರತೆ ಉಂಟಾಗಿದೆ ಎಂದು ತಿಳಿಸಿ ರಕ್ತದಾನದ ಪ್ರಯೋಜನಗಳನ್ನು ವಿವರಿಸಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಅರುಣಕುಮಾರ ಮಾತನಾಡಿ, ಅಪರೂಪದ ಬ್ಲಡ್ ಗ್ರೂಪಿನ ಸದಸ್ಯರು ಅವಶ್ಯವಾಗಿ ರಕ್ತದಾನ ಮಾಡಿದಲ್ಲಿ ಅನೇಕ ಜೀವಗಳನ್ನು ಉಳಿಸಿದ ತೃಪ್ತಿ ನಮಗಿರುತ್ತದೆ. ರಕ್ತದಾನ ಮಾಡುವುದರಿಂದ ದೇಹಕ್ಕೆ ಹೊಸ ರಕ್ತ ಪಡೆಯುವ ಅವಕಾಶ ಸಿಗುತ್ತದೆ ಮತ್ತು ಹೃದ್ರೋಗದ ಅಪಾಯಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದರು.
 ಶಿಬಿರದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಮೀರ ಕೊಳ್ಳಿ, ಜಿಲ್ಲಾಸ್ಪತ್ರೆಯ ವೈದ್ಯ ಡಾ.ಮುರಳೀಧರ ಹಾಗೂ ಹಿರಿಯ ವಕೀಲರು, ಸಿಬ್ಬಂದಿ ವರ್ಗ ಹಾಜರಿದ್ದು ಶಿಬಿರದ ಯಶಸ್ಸಿಗೆ ಶ್ರಮಿಸಿದರು. ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷರಾದ ಗೋಪನಾಳ್ ಬಸವರಾಜ್, ಸಹಕಾರ್ಯದರ್ಶಿ ಮಂಜುನಾಥ್, ಕಾರ್ಯಕಾರಿ ಸಮಿತಿ ಸದಸ್ಯರಾದ ಭಾಗ್ಯಲಕ್ಷ್ಮಿ ಉಪಸ್ಥಿತರಿದ್ದರು.  ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಜಿ.ಕೆ.ಬಸವರಾಜ್ ನಿರೂಪಿಸಿದರು.

Leave a Reply

Your email address will not be published. Required fields are marked *