ನ್ಯಾಮತಿ:ಚೀಲೂರು ಸರ್ಕಾರದ ವಿವಿಧ ಯೋಜನೆಗಳ ಸದುಪಯೋಗವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ದಾವಣಗೆರೆ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ ಬಿ.ಇಟ್ನಾಳ್ ಹೇಳಿದರು.
ತಾಲ್ಲೂಕಿನ ಚೀಲೂರು ಗ್ರಾಮದಲ್ಲಿ ಬುಧವಾರ ಜಿಲ್ಲಾ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಕಚೇರಿ ಸಹಯೋಗದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.
ಮಹಾತ್ಮಗಾಂಧಿ ಉದ್ಯೋಗಖಾತಿ ್ರಯೋಜನೆ ಮತ್ತು ವಿವಿಧ ಸರ್ಕಾರದ ಯೋಜನೆಗಳನ್ನು ಅನುಷ್ಠಾನ ತರುವಲ್ಲಿಆಯಾ ಗ್ರಾಮಾಡಳಿತ ಮತ್ತು ಸಾರ್ವಜನಿಕರು ಮುಂದಾಗಬೇಕುಎಂದರು.
ಬಸವೇಶ್ವರ ನಗರದಅನಧಿಕೃತ ಮನೆಗಳಿಗೆ ತಹಶೀಲ್ದಾರ್ ಅವರೊಂದಿಗೆ ಚರ್ಚಿಸಿ94ಸಿ ಅಡಿಯಲ್ಲಿ ಪಟ್ಟಾ ನೀಡಲು ಕ್ರಮಕೈಗೊಳ್ಳುವಂತೆ ಪಿಡಿಒಅವರಿಗೆ ಸೂಚಿಸಿದರು.ಕಸ ಶುದ್ಧಿಕರಣ ಸ್ವಚ್ಛತಾಘಟಕಕ್ಕೆ ಭೇಟಿ ನೀಡಿ ಸಿಬ್ಬಂದಿಗಳ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸಾರ್ವಜನಿಕರಿಂದ ವಿವಿಧ ಸಮಸ್ಯೆಗಳ ಕುರಿತು 506 ಅರ್ಜಿಗಳು ಬಂದಿದ್ದು.ಅವುಗಳಿಗೆ ಸ್ಥಳದಲ್ಲಿಯೇ ಪರಿಹಾರ ಸೂಚಿಸಿದರು.
ನ್ಯಾಮತಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಜಿ.ಟಿ.ರಾಘವೇಂದ್ರ, ಯೋಜನಾಧಿಕಾರಿ ಮಲ್ಲನಾಯ್ಕ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪಾ, ಉಪಾಧ್ಯಕ್ಷೆ ಪ್ರಸನ್ನ ಹಾಗೂ ವಿವಿಧ ಇಲಾಖೆಗಳ ಮುಖ್ಯಸ್ಥರುಇದ್ದರು.