ನ್ಯಾಮತಿ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಆಡಳಿತಾತ್ಮಕ ಸಮಸ್ಯೆಗಳನ್ನು ಸ್ಥಳದಲ್ಲಿ ಪರಿಹರಿಸುವ ನಿಟ್ಟಿನಲ್ಲಿ ಗುರುವಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಂಜರಾಜ್ ಹೇಳಿದರು.
ನ್ಯಾಮತಿ ಸಮೀಪದ ಸುರಹೂನ್ನೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಕ್ಷೇತ್ರ ಸಮನ್ವಿದೀಕಾರಿ ಕಚೇರಿ ಮತ್ತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಕ್ಲಸ್ಟರ್ ಮಠದ ಗುರುವಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಕರ ಸೇವಾ ಸೌಲಭ್ಯಗಳ ನೂನ್ಯತೆ, ಆರ್ಥಿಕ ಸೇವೆ ನಿವೃತ್ತಿ ಸೌಲಭ್ಯ, ಸೇವಾ ಪುಸ್ತಕದಲ್ಲಿ ಕಾಲಮಿತಿ ವೇತನ ಬಡ್ತಿ , ಸೌಲಭ್ಯಗಳ ದಾಖಲೆಗಳ ಬಗ್ಗೆ ಪರಿಶೀಲಿಸಲು ಶಿಕ್ಷಕರಿಗೆ ಅವರ ಸೇವಾ ಪುಸ್ತಕಗಳನ್ನು ನೀಡಲಾಗುವುದು ನಂತರ ಅವರ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸಲಾಗುವುದು ಎಂದು ತಿಳಿಸಿದರು. ಸೌಳಂಗ, ಬೆಳಗುತ್ತಿ, ನ್ಯಾಮತಿ, ಸುರಹೂನ್ನೇ ಕ್ಲಸ್ಟರ್ ಗಳಿಂದ 160ಕ್ಕೂ ಹೆಚ್ಚು ಶಿಕ್ಷಕರು ಭಾಗವಹಿಸಿದ್ದರು. ಕ್ಷೇತ್ರ ಸಮನ್ವಯಾಧಿಕಾರಿ ಎಂ ತಿಪ್ಪೇಶಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಿ ರಾಮಪ್ಪ, ತಾಲೂಕು ಘಟಕದ ಅಧ್ಯಕ್ಷ ಬಸವರಾಜ್ ಬಾವಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *