ಸೊರಬ:
ಬಿಜೆಪಿ ಪಕ್ಷದಲ್ಲಿನ ಇತ್ತೀಚಿನ ಬೆಳವಣಿಗೆಯಿಂದ ಅನೇಕ ನಾಯಕರ ಮನಸ್ಸಿಗೆ ನೋವಾಗಿದೆ. ಕಾರ್ಯಕರ್ತರು ನಲುಗಿಹೋಗಿದ್ದಾರೆ. ಹೀಗಾಗಿ ಪಕ್ಷದ ಪುನಶ್ಚೇತನ ಬಯಸುತ್ತಿದ್ದಾರೆ. ಇವರ ಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಪಕ್ಷೇತರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ತಿಳಿಸಿದರು.
ಸೊರಬ ವಿಧಾನ ಸಭಾ ಕ್ಷೇತ್ರದಲ್ಲಿ ಶನಿವಾರ ಚುನಾವಣಾ ಕಾರ್ಯಾಲಯ ಉದ್ಘಾಟನೆ ಬಳಿಕ ಮಾತನಾಡಿದ ಅವರು, ನಾನು ರಾಜ್ಯದಲ್ಲಿ ಹಿಂದುತ್ವದ ಪರವಾಗಿ ಹೋರಾಟ ಮಾಡುತ್ತಿರುವವರ ಪ್ರತಿನಿಧಿಯಾಗಿ ಸ್ಪರ್ಧೆ ಮಾಡುತ್ತಿದ್ದೇನೆ. ನನಗಿಂತ ದೊಡ್ಡ ಹೋರಾಗಾರರು ಇದ್ದಾರೆ. ಸಿ.ಟಿ.ರವಿ, ಪ್ರತಾಪ್ ಸಿಂಹ, ನಳಿನ್ ಕುಮಾರ್ ಕಟೀಲ್, ಬಸವನಗೌಡ ಪಾಟೀಲ್ ಯತ್ನಾಳ್, ಅನಂತ ಕುಮಾರ್ ಹೆಗ್ಗಡೆ ಇವರೆಲ್ಲಾ ಹಿಂದುತ್ವ ಪರವಾದ ಹೋರಾಟಗಾರರು ಇದ್ದಾರೆ. ಇವರೆಲ್ಲರ ಮನಸ್ಸಿಗೆ ನೋವಾಗಿದೆ. ಪಕ್ಷದ ಪುನಶ್ಚೇತನ ಬಯಸುತ್ತಿದ್ದಾರೆ ಇವರ ಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದೇನೆ ಎಂದು ತಿಳಿಸಿದರು.
ಸೊರಬದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮೂರು ಪಕ್ಷದ ಕಾರ್ಯಕರ್ತರು ನಮ್ಮ ಚುನಾವಣಾ ಪ್ರಚಾರ ಕಾರ್ಯಕ್ಕೆ ಜೊತೆಯಾಗಿದ್ದಾರೆ. ಏ.12ರಂದು ನಾಮಪತ್ರ ಸಲ್ಲಿಸುತ್ತೇನೆ. ಅಂದು ಬೆಳಗ್ಗೆ 10ಕ್ಕೆ ರಾಮಣ್ಣ ಶ್ರೇಷ್ಠಿ ಪಾರ್ಕ್‌ನಿಂದ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಲಿದ್ದೇನೆ. ಮೆರವಣಿಗೆಯಲ್ಲಿ 25ಸಾವಿರಕ್ಕೂ ಹೆಚ್ಚು ಮಂದಿ ಹಿತೈಷಿಗಳು, ಅಭಿಮಾನಿಗಳು, ಕಾರ್ಯಕರ್ತರು, ಬೆಂಬಲಿಗರು ಭಾಗಿ ನನಗೆ ಆಶೀರ್ವಾದ ಮಾಡಲಿದ್ದಾರೆ ಎಂದು ತಿಳಿಸಿದರು.
ಬೆಳಗ್ಗೆ ಸಾಗರದ ಭದ್ರಕಾಳಿ ಕಲ್ಯಾಣ ಮಂದಿರದಲ್ಲಿ ವಿಶೇಷವಾದ ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ಸಾಗರ ಪಟ್ಟಣ ಹಾಗು ಸುತ್ತಮುತ್ತ ಗ್ರಾಮದಿಂದ ಸ್ತ್ರೀ ಶಕ್ತಿ ಸಂಘಗಳಿಂದ ಸಾವಿರಾರು ಸಂಖ್ಯೆಯಲ್ಲಿ ತಾಯಂದಿರು ಮಹಿಳೆಯರು ಕಾರ್ಯಕರ್ತರು ಆಗಮಿಸಿ ನನಗೆ ಆಶೀರ್ವಾದ ಮಾಡಿ ಬೆಂಬಲ ಸೂಚಿಸಿ ಕಾರ್ಯಕ್ರಮದ ಯಶಸ್ವಿಗೆ ಕಾರಣರಾಗಿದ್ದಾರೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *