ಹೊನ್ನಾಳಿ ಪುರಸಭೆಯ ಕಚೇರಿಯಲ್ಲಿ ಮೇ 21 ರಂದು ಭಯೋತ್ಪಾದಕ ವಿರೋಧಿ ದಿನದ ಪ್ರಯುಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿಯವರಿಂದ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.
ಪುರಸಭೆಯ ಮುಖ್ಯಾಧಿಕಾರಿ ನಿರಂಜನಿಯವರು ಪ್ರತಿಜ್ಞಾವಿಧಿ ಬೋಧಿಸಿ ಅಹಿಂಸೆ ಹಾಗೂ ಸಹನೆಗೆ ಹೆಸರಾದ ನಮ್ಮ ರಾಷ್ಟ್ರದÀ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪ್ರಜೆಗಳಾದ ನಾವು ಎಲ್ಲ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಶಕ್ತಿ, ಸಾಮಥ್ರ್ಯದಿಂದ ಎದುರಿಸುತ್ತೇವೆ. ಹಾಗೂ ನಮ್ಮ ಸಹಬಾಂಧವರಲ್ಲಿ ಶಾಂತಿ, ಸಾಮಾಜಿಕ ಸೌಹಾರ್ಧತೆ ಮತ್ತು ಪರಸ್ಪರ ಅರಿವನ್ನು ಸಾಧಿಸಲು ಹಾಗೂ ಉತ್ತೇಜಿಸಲು, ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆ ಒಡ್ಡುತ್ತಿರುವ ವಿಚ್ಚಿದ್ರಕಾರಿ ಶಕ್ತಿಗಳ ವಿರುದ್ದ ಹೋರಾಡಲು ಪಣ ತೊಡುತ್ತೇವೆ ಎಂದು ಪ್ರತಿಜ್ಞೆ ಸ್ವೀಕರಿಸಲಾಯಿತು.
ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.