ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಾನಗರಪಾಲಿಕೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಇವರುಗಳ ಸಹಯೋಗದಲ್ಲಿ ಜೂನ್ 5 ರಂದು ಸಂಜೆ 4 ಗಂಟೆಗೆ ನಗರದ ಶಿವನಗರ ಬಳಿ ಇರುವ ಎಸ್‍ಟಿಪಿ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಿವನಗರ ತ್ಯಾಜ್ಯ ನೀರು ಸಂಸ್ಕರಣಾ ಘಟಕದ ಬಳಿ 6 ಎಕರೆ ಜಾಗದಲ್ಲಿ 5000 ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ.
ಹಿರಿಯ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ.ಮ.ಕರೆಣ್ಣವರ ಕಾರ್ಯಕ್ರಮವನ್ನು ಉದ್ಘಾಟಿಸುವರು. ಮಹಾನಗರಪಾಲಿಕೆಯ ಆಯುಕ್ತರಾದ ರೇಣುಕಾ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಅಧಿಕಾರಿ ಡಾ.ಹೆಚ್.ಲಕ್ಷ್ಮೀಕಾಂತ್ ಭಾಗವಹಿಸುವರು.