ನ್ಯಾಮತಿ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ, ರಾಷ್ಟ್ರೀಯ ಸೇವಾ ಯೋಜನೆ ಘಟಕ ರೋವರ್ಸ್ ಮತ್ತು ರೆಂಜರ್ಸ್ ಘಟಕಗಳ ಅಡಿಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕಾಲೇಜಿನ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ವಿ.ಪಿ ಪೂರ್ಣನಂದ ನಂತರ ಮಾತನಾಡಿದ ಅವರು ಪ್ರತಿ ವಿದ್ಯಾರ್ಥಿಯು ಗಿಡಗಳನ್ನು ನೆಡುವುದರ ಮೂಲಕ ಪರಿಸರಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದುರು .ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನ್ಯಾಮತಿ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷರಾದ ನಿಜಲಿಂಗಪ್ಪ ಇವರು ಪರಿಸರದ ಉಳಿವಿನ ಬಗ್ಗೆ ಮತ್ತು ಪ್ಲಾಸ್ಟಿಕ್ ಮುಕ್ತ ವಾತಾವರಣದ ಸೃಷ್ಟಿಯಾಗಬೇಕಾಗಿದೆ ಎಂದರು. ಎಸ್ ಡಿ ಎಂ ಸಿ ಯ ಅಧ್ಯಕ್ಷ ಕರಿಬಸಪ್ಪ ಪರಿಸರದ ದಿನದ ಕುರಿತು ಮಾತನಾಡಿದ ಅವರು ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ಜನ್ಮದಿನದಂದು ಒಂದು ಸಸಿ ನೆಡುವುದರೂಂದಿಗೆ ಆಚರಣೆ ಮಾಡಿಕೊಳ್ಳಿ ಎಂದುರು. ಉಪನ್ಯಾಸಕರಾದ ಗಂಗಾಧರ್ ನವಲೆ ಇವರು ವಿಶ್ವ ಪರಿಸರ ದಿನಾಚರಣೆಯ ಮಹತ್ವದ ಬಗ್ಗೆ ತಿಳಿಸಿದರು. ಉಪಾಧ್ಯಕ್ಷ ಲಲಿತಾ, ಸದಸ್ಯ ಮಧುರಾಜ್, ಉಪನ್ಯಾಸಕರಾದ ರೂಪ ,ಮಾನಸ, ಅಮೃತ್ ,ನಾಗರಾಜ್, ಶಿವಕುಮಾರ್ ಉಪಸ್ಥಿತರಿದ್ದರು .